ಬೆಂಗಳೂರು : ಮಾಜಿ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕೋವಿಡ್ ಸಂಧರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ರಾಜ್ಯ ಸರ್ಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬಿಜೆಪಿ BJP ಸರ್ಕಾರ ಅವಧಿಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾಗಿದ್ದಾಗ ಡಾ.ಕೆ.ಸುಧಾಕರ್ ರವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.2021ರ ಜುಲೈ-ಆಗಸ್ಟ್ ನಲ್ಲಿ ನಡೆದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ನೀಡಿರುವಂತೆ ಕೋವಿಡ್ ನಿರ್ವಹಣೆ ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು.
ವಿಚಾರಣಾ ಆಯೋಗವು ಸಂಬಂಧಪಟ್ಟ ಇಲಾಖೆಗಳಿಂದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಟೆಂಡರ್, ವೈದ್ಯಕೀಯ ಉಪಕರಣ, ವೆಂಟಿಲೇಟರ್ಗಳ ಖರೀದಿ ಹಾಗೂ ಆಮ್ಲಜನಕ ನಿರ್ವಹಣೆ ಬಗ್ಗೆ ಎರಡು ಲಕ್ಷಕ್ಕೂ ಅಧಿಕ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿದೆ.
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಜಿಲ್ಲೆಗಳಲ್ಲಿ ಖರೀದಿಗಳ ಬಗ್ಗೆ ಹಾಗೂ ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಮಾಡಿರುವ ಕುರಿತು ದಾಖಲೆಗಳನ್ನು ತರಿಸಿಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಈಗಾಗಲೇ ವಿಚಾರಣೆ ನಡೆಸಿದೆ. ಈ ಎಲ್ಲವನ್ನೂ ಕ್ರೂಢೀಕರಿಸಿ ವರದಿ ಸಿದ್ಧಪಡಿಸಿರುವ ಆಯೋಗವು, ಸರ್ಕಾರಕ್ಕೆ ಸಲ್ಲಿಸಲು ತಯಾರಿ ಮಾಡಿಕೊಂಡಿದೆಯಾದರೂ, 3 ತಿಂಗಳ ಕಾಲಾವಕಾಶ ನೀಡಿದ್ದರೂ ಸಹ 8 ತಿಂಗಳಾದರೂ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಈ ನಡುವೆ ‘ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ರವರು ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ನ ಯಾವ್ಯಾವ ನಾಯಕರಿಗೆ ಭೇಟಿಯಾಗಿದ್ದಾರೆಂಬುದು ಗೊತ್ತಿದೆ’ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ರವರು ಹೇಳಿಕೆಯನ್ನು ನೀಡಿದ್ದಾರೆ. ಜವಾಬ್ದಾರಿಯುತ ಜನಪ್ರತಿನಿಧಿಯಾಗಿರುವ ಪ್ರದೀಪ್ ಈಶ್ವರ್ ರವರು ನೀಡಿರುವ ಹೇಳಿಕೆಯ ವಿಚಾರಣೆಯನ್ನು ಕೂಲಂಕೂಷವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆಳೆಯುವುದಲ್ಲದೆ, ತಪ್ಪು ಮಾಹಿತಿಗಳನ್ನು ಒದಗಿಸಿ ಸಮಿತಿಯ ದಿಕ್ಕು ತಪ್ಪಿಸುವ ಪ್ರಯತ್ನವೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಆಗಿದೆ.ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದನ್ನು ಪರಿಗಣಿಸಿ, ವಾಸ್ತವಿಕ ಸತ್ಯ ಮರೆಮಾಚಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗಲು ಕಾರಣರಾಗಿರುವ ಮಾಜಿ ಸಚಿವ ಡಾ. ಕೆ. ಸುಧಾಕರ್ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.