• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಾ.ಕೆ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಲೋಕಾಯುಕ್ತಕ್ಕೆ ದೂರು..!

Any Mind by Any Mind
April 1, 2024
in ಇದೀಗ, ರಾಜಕೀಯ
0
ಡಾ.ಕೆ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಲೋಕಾಯುಕ್ತಕ್ಕೆ ದೂರು..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಮಾಜಿ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.‌ ಕೋವಿಡ್ ಸಂಧರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ‌ ಆರೋಪ ಎದುರಿಸುತ್ತಿರುವ ಅಂದಿನ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ರಾಜ್ಯ ಸರ್ಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬಿಜೆಪಿ BJP ಸರ್ಕಾರ ಅವಧಿಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾಗಿದ್ದಾಗ ಡಾ.ಕೆ.ಸುಧಾಕರ್ ರವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.2021ರ ಜುಲೈ-ಆಗಸ್ಟ್ ನಲ್ಲಿ ನಡೆದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ನೀಡಿರುವಂತೆ ಕೋವಿಡ್ ನಿರ್ವಹಣೆ ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು.

ವಿಚಾರಣಾ ಆಯೋಗವು ಸಂಬಂಧಪಟ್ಟ ಇಲಾಖೆಗಳಿಂದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಟೆಂಡರ್, ವೈದ್ಯಕೀಯ ಉಪಕರಣ, ವೆಂಟಿಲೇಟರ್‌ಗಳ ಖರೀದಿ ಹಾಗೂ ಆಮ್ಲಜನಕ ನಿರ್ವಹಣೆ ಬಗ್ಗೆ ಎರಡು ಲಕ್ಷಕ್ಕೂ ಅಧಿಕ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿದೆ.
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಜಿಲ್ಲೆಗಳಲ್ಲಿ ಖರೀದಿಗಳ ಬಗ್ಗೆ ಹಾಗೂ ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಮಾಡಿರುವ ಕುರಿತು ದಾಖಲೆಗಳನ್ನು ತರಿಸಿಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಈಗಾಗಲೇ ವಿಚಾರಣೆ ನಡೆಸಿದೆ. ಈ ಎಲ್ಲವನ್ನೂ ಕ್ರೂಢೀಕರಿಸಿ ವರದಿ ಸಿದ್ಧಪಡಿಸಿರುವ ಆಯೋಗವು, ಸರ್ಕಾರಕ್ಕೆ ಸಲ್ಲಿಸಲು ತಯಾರಿ ಮಾಡಿಕೊಂಡಿದೆಯಾದರೂ, 3 ತಿಂಗಳ ಕಾಲಾವಕಾಶ ನೀಡಿದ್ದರೂ ಸಹ 8 ತಿಂಗಳಾದರೂ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಈ ನಡುವೆ ‘ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ರವರು ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್‌ನ ಯಾವ್ಯಾವ ನಾಯಕರಿಗೆ ಭೇಟಿಯಾಗಿದ್ದಾರೆಂಬುದು ಗೊತ್ತಿದೆ’ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ರವರು ಹೇಳಿಕೆಯನ್ನು ನೀಡಿದ್ದಾರೆ. ಜವಾಬ್ದಾರಿಯುತ ಜನಪ್ರತಿನಿಧಿಯಾಗಿರುವ ಪ್ರದೀಪ್ ಈಶ್ವರ್ ರವರು ನೀಡಿರುವ ಹೇಳಿಕೆಯ ವಿಚಾರಣೆಯನ್ನು ಕೂಲಂಕೂಷವಾಗಿ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆಳೆಯುವುದಲ್ಲದೆ, ತಪ್ಪು ಮಾಹಿತಿಗಳನ್ನು ಒದಗಿಸಿ ಸಮಿತಿಯ ದಿಕ್ಕು ತಪ್ಪಿಸುವ ಪ್ರಯತ್ನವೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಆಗಿದೆ.ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದನ್ನು ಪರಿಗಣಿಸಿ, ವಾಸ್ತವಿಕ ಸತ್ಯ ಮರೆಮಾಚಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗಲು ಕಾರಣರಾಗಿರುವ ಮಾಜಿ ಸಚಿವ ಡಾ. ಕೆ. ಸುಧಾಕರ್ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags: #dksudhakarCongress PartyLOKAYUKTA DR K SUDHAKAR PRADEEP ESHWAR BENGALURU LOKAYUKTAPRADEEP ESHWARಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಕೆ ಮತ್ತು ಹೆಚ್.ಡಿ.ಕೆ ನಡುವೆ ವಿಷ ಹಾಗೂ ಅಮೃತದ ಫೈಟ್ ! ತಾರಕಕ್ಕೇರಿದ ಮಾತಿನ ಯುದ್ಧ ! 

Next Post

ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 

Related Posts

ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್
ರಾಜಕೀಯ

ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್

by ಪ್ರತಿಧ್ವನಿ
June 22, 2026
0

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಭವಿಷ್ಯದ ರಾಜಕೀಯ ದಿಕ್ಕು, ಸಿದ್ಧಾಂತ ಹಾಗೂ...

Read moreDetails
‘ನನ್ನ ಹೋರಾಟ ಸಿದ್ದರಾಮಯ್ಯ ವಿರುದ್ಧವಲ್ಲ, ರೈತರ ಭೂಮಿ ಉಳಿಸಲು’ : ಹೆಚ್‌ಡಿಕೆ ಸ್ಪಷ್ಟನೆ

‘ನನ್ನ ಹೋರಾಟ ಸಿದ್ದರಾಮಯ್ಯ ವಿರುದ್ಧವಲ್ಲ, ರೈತರ ಭೂಮಿ ಉಳಿಸಲು’ : ಹೆಚ್‌ಡಿಕೆ ಸ್ಪಷ್ಟನೆ

June 22, 2026
“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

June 21, 2026
“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

June 21, 2026
BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

June 21, 2026
Next Post
ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 

ಇವಿಎಂ ಮತ್ತು ವಿವಿ ಪ್ಯಾಟ್ ಸ್ಲಿಪ್ ಗಳನ್ನು 100% ಪರಿಶೀಲಿಸಬೇಕು ! ECI ಗೆ ಸುಪ್ರೀಂ ಕೋರ್ಟ್ ನೋಟೀಸ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!