• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಸರ್ಕಾರದ ಭರ್ಜರಿ ನೆರವು: ‘ದೀಪಿಕಾ’ ವಿದ್ಯಾರ್ಥಿವೇತನದ ಸಂಪೂರ್ಣ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in Top Story, ಕರ್ನಾಟಕ, ರಾಜಕೀಯ
0
ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಸರ್ಕಾರದ ಭರ್ಜರಿ ನೆರವು: ‘ದೀಪಿಕಾ’ ವಿದ್ಯಾರ್ಥಿವೇತನದ ಸಂಪೂರ್ಣ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ‘ದೀಪಿಕಾ’ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

CM DK Shivakumar : ಪರಿಷತ್‌ನಲ್ಲಿ ಬಿಜೆಪಿಗರಿಗೆ ಚಳಿಬಿಡಿಸಿದ ಸಿಎಂ ಡಿಕೆ ಶಿವಾಕುಮಾರ್..! #bnagendra #bjp

ಶನಿವಾರ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 30 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುವುದು. ಎಂಜಿನಿಯರಿಂಗ್, ವೈದ್ಯಕೀಯ, ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ವಿವಿಧ ಪದವಿ ಹಾಗೂ ಉನ್ನತ ಶಿಕ್ಷಣದ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರು ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದು. ಮೂರು ವರ್ಷದ ಪದವಿ ಕೋರ್ಸ್ ಪೂರ್ಣಗೊಳಿಸುವ ವಿದ್ಯಾರ್ಥಿನಿಗೆ ಒಟ್ಟು 90 ಸಾವಿರ ರೂ. ನಾಲ್ಕು ವರ್ಷದ ಕೋರ್ಸ್‌ಗೆ 1.20 ಲಕ್ಷ ರೂ. ಹಾಗೂ ಐದು ವರ್ಷದ ವೈದ್ಯಕೀಯ ಕೋರ್ಸ್‌ಗೆ ಸುಮಾರು 1.50 ಲಕ್ಷ ರೂ. ನೆರವು ದೊರೆಯಲಿದೆ ಎಂದರು.

ಆದಾಯ, ಜಾತಿ, ಮೆರಿಟ್‌ ಮಾನದಂಡವಿಲ್ಲ

ವಿದ್ಯಾರ್ಥಿವೇತನಕ್ಕೆ ಯಾವುದೇ ಆದಾಯ ಮಿತಿ ಇಲ್ಲ. ಜಾತಿ, ವರ್ಗ ಅಥವಾ ಯಾವುದೇ ಇತರ ಮಾನದಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದಿರುವ ಅರ್ಹ ವಿದ್ಯಾರ್ಥಿನಿಯರು ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಸಚಿವರು ಸ್ಪಷ್ಟಪಡಿಸಿದರು.

Priyank Kharge : IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ. ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು?‌#ias #officer

ಈ ವರ್ಷ ವಿವಿಧ ಪದವಿ ಕಾಲೇಜುಗಳಲ್ಲಿ ಈಗಾಗಲೇ 33 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದಾರೆ. ಇನ್ನೂ ಪ್ರವೇಶ ಪಡೆಯದ ಅರ್ಹ ವಿದ್ಯಾರ್ಥಿನಿಯರು ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆದು ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬೇಕು. ಅರ್ಜಿ ಸಲ್ಲಿಸಲು ಮೊದಲ ಹಂತದಲ್ಲಿ ಆಗಸ್ಟ್ 31ರವರೆಗೆ ಅವಕಾಶವಿದೆ ಎಂದು ತಿಳಿಸಿದರು.

ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣುಮಕ್ಕಳು ಹಿಂಜರಿಕೆಗೆ ಒಳಗಾಗದೆ ಸಮಾನ ಅವಕಾಶಗಳನ್ನು ಪಡೆಯಬೇಕು. ಲಿಂಗ ಸಮಾನತೆ ಸಾಧಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅರ್ಹ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.

DK Shivakumar : ನಾಗೇಂದ್ರಗೆ ನಾನೇ ಹೇಳ್ತೀನಿ ರಾಜೀನಾಮೆ ಕೊಡೋಕೆ..!| #pratidhvani

ಪದವಿ, ಸ್ನಾತಕೋತ್ತರ ಶಿಕ್ಷಣಕ್ಕೂ ಹೆಚ್ಚಿನ ಅವಕಾಶ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಎಂಎ, ಎಂಕಾಂ, ಎಂಎಸ್ಸಿ ಸೇರಿದಂತೆ ಎಲ್ಲ ಸ್ನಾತಕೋತ್ತರ ಕೋರ್ಸ್‌ಗಳಲ್ಲಿಯೂ ವಿದ್ಯಾರ್ಥಿನಿಯರಿಗೆ ಸುಲಭವಾಗಿ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ಈ ವೇಳೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನು ಮೊದಲ ಸುತ್ತಿನ ಹೊಸ ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಉನ್ನತ ವ್ಯಾಸಂಗದ ಕನಸು ಕಾಣುತ್ತಿರುವ ನಾಡಿನ ಅರ್ಹ ವಿದ್ಯಾರ್ಥಿನಿಯರು ಕಡ್ಡಾಯವಾಗಿ https://azimpremjifoundation.org ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕಾಗಿ ಕೋರಲಾಗಿದೆ.

Priyank Kharge : ಈಗ ಮೋದಿ ಪಾಪ್ಯುಲಾರಿಟಿ ಕಡಿಮೆಯಾಗ್ತಿದೆ, ಅದರ ಬಗ್ಗೆ ಬಿಜೆಪಿಯವ್ರಿಗೆ ಆತಂಕ ಹೆಚ್ಚಿದೆ..
Tags: Basvaraj RayareddiBJPcongressKarnatakaKarnataka GovernmentKarnataka PoliticsPoliticsscholarship
Previous Post

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಪಾತ್ರವಿಲ್ಲ ; ಸಿಎಂ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಹೇಳಿಕೆ

Next Post

ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post
ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

ತೆರೆಮೇಲೆ ಬರಲಿದೆ ಮಹಾವೀರ ಕರ್ಣನ ಸಿನಿಮಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada