• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇ 10ರಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್‌ ಘೋಷಣೆ

Any Mind by Any Mind
May 7, 2021
in ಕರ್ನಾಟಕ
0
ಮೇ 10ರಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್‌ ಘೋಷಣೆ
Share on WhatsAppShare on FacebookShare on Telegram

ಕರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಕಠಿಣ ನಿರ್ಬಂಧಗಳ ಹೊರತಾಗಿಯೂ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿಲ್ಲ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆಯಿಂದಾಗಿಯೇ ರೋಗಿಗಳು ಮೃತಪಡುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್‌ ಮೊರೆ ಹೋಗಿದೆ.

ADVERTISEMENT

ಮೇ 10 ರ ಬೆಳಗ್ಗೆ 6 ಗಂಟೆಯಿಂದ 24 ಮೇ ಬೆಳಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ. ಕರೋನಾ ಕರ್ಫ್ಯೂ ಈವರೆಗೆ ಯಾವುದೇ ಹೆಚ್ಚಿನ ಪರಿಣಾಮ ಬೀರದ ಕಾರಣ ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಹೋಟೆಲ್‌, ರೆಸ್ಟಾರೆಂಟ್‌ಗಳಲ್ಲಿ ಆಹಾರ ಪಾರ್ಸೆಲ್‌ ವ್ಯವಸ್ಥೆ ಇರುತ್ತದೆ. ಸಾರಿಗೆ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಅಗತ್ಯ ಸೇವೆಗಳು ಲಭ್ಯವಿರುತ್ತದೆ. ಹಾಲು, ಔಷಧ, ತರಕಾರಿಗಳಿಗೆ ಅವಕಾಶವಿದೆ. ಬಾರ್‌ ಗಳಲ್ಲಿ ಕೂಡಾ ಪಾರ್ಸೆಲ್‌ ವ್ಯವಸ್ಥೆ ಅವಕಾಶ ಇದೆ.

ಮೆಟ್ರೋ, ಆಟೋ, ಟ್ಯಾಕ್ಸಿಗಳ ಸೇವೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಮದುವೆಗಳಲ್ಲಿ 50 ಮಂದಿಗಳಿಗೆ ಅವಕಾಶವಿದೆ. ಅಂತರ್‌-ಜಿಲ್ಲಾ ಪ್ರಯಾಣಕ್ಕೆ ಅವಕಾಶ ಇಲ್ಲ. ಅದಾಗ್ಯೂ, ರೈಲು, ವಿಮಾನ ಸಂಚಾರಗಳು ಅದರ ಪಾಡಿಗೆ ಇರಲಿವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

·      ಹೊಸ ಮಾರ್ಗಸೂಚಿಯು ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ.

·      ಈ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.

·      ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.

·      ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

·      ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.

·      ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

·      ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

·      ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

·      ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.

·      ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.

·      ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

·      ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

·      ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.

·      ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

·      ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

·      ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

·      ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

·      ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

·      ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

·      ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

·      ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

·      ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.

·      ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

·      ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.

Previous Post

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Next Post

ಕತಾರ್ ಏರ್‌ವೇಸ್ ಭಾರತಕ್ಕೆ ಉಚಿತವಾಗಿ ಸಹಾಯವನ್ನು ನೀಡಲಿದೆ: ಕತಾರ್ ಏರ್‌ವೇಸ್ CEO ಅಲ್ ಬಾಕರ್

Related Posts

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ
Top Story

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ. ದೇಶದ ಮೂಲೆಮೂಲೆಗೂ ಹೋಗಿ ಮೈಕು ಹಿಡಿದು ವಿದ್ಯಾರ್ಥಿಗಳು, ಯುವಜನರ ಜೊತೆ ಸಂವಾದ ನಡೆಸುವ ನೀವು ಬೆಂಗಳೂರಿಗೆ...

Read moreDetails
ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

August 30, 2026
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

August 30, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

ಬಿ.ನಾಗೇಂದ್ರ ರಾಜೀನಾಮೆ ಅಂಗೀಕಾರ: ರಾಜ್ಯಪಾಲರಿಂದ ಅಧಿಕೃತ ಆದೇಶ

August 30, 2026
Next Post
ಕತಾರ್ ಏರ್‌ವೇಸ್ ಭಾರತಕ್ಕೆ ಉಚಿತವಾಗಿ ಸಹಾಯವನ್ನು ನೀಡಲಿದೆ: ಕತಾರ್ ಏರ್‌ವೇಸ್ CEO ಅಲ್ ಬಾಕರ್

ಕತಾರ್ ಏರ್‌ವೇಸ್ ಭಾರತಕ್ಕೆ ಉಚಿತವಾಗಿ ಸಹಾಯವನ್ನು ನೀಡಲಿದೆ: ಕತಾರ್ ಏರ್‌ವೇಸ್ CEO ಅಲ್ ಬಾಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada