ಒಸಿಐ ಮಾನ್ಯತೆ ರದ್ದು ಹಿನ್ನೆಲೆ, ಗಡೀಪಾರು ಭೀತಿಯಲ್ಲಿದ್ದ ನಟ ಚೇತನ್ ಅಹಿಂಸಾಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ದೊರೆತಿದೆ. ನ್ಯಾಯಾಧೀಶ ಎಂ ನಾಗಪ್ರಸನ್ನರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನಟ ಚೇತನ್ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರ್ಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು.
ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು. ಎರಡು ಕಡೆಯ ವಕೀಲರ ವಾದವನ್ನು ಆಲಿಸಿದ ಹೈಕೋರ್ಟ್ ನಟ ಚೇತನ್ ಅಹಿಂಸಾಗೆ ಷರತ್ತುಬದ್ಧ ರಿಲೀಫ್ ನೀಡಿದೆ. ನ್ಯಾಯಾಂಗದ ಬಗ್ಗೆ ನಟ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್ಗಳ ಬಗ್ಗೆಯೂ ಟ್ವೀಟ್ ಮಾಡುವಂತಿಲ್ಲ ಎಂದ ಕೋರ್ಟ್ ಜೂ. 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.