• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಔಷಧಿಗಳ ಟೆಸ್ಟಿಂಗ್ ಸಮಯಕ್ಕೆ ಸರಿಯಾಗಿ ನಡೆಸಿ – ಡ್ರಗ್ ಕಂಟ್ರೋಲ್ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು.

ADVERTISEMENT

ಈ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ 22 ಬ್ಯಾಚ್ ಗಳ NSQ ವರದಿಯಲ್ಲಿ 13 ಬ್ಯಾಚ್ ಗಳ ವರದಿ ಪ್ರಶ್ನಿಸಿ ಕಂಪನಿಯವರು ಸೆಂಟ್ರಲ್ ಡ್ರಗ್ ಲ್ಯಾಬರೋಟಿರಿ ಮೆಟ್ಟಿಲೇರಿದ್ದಾರೆ. ಅದರಲ್ಲಿ 4 ಬ್ಯಾಚ್ ಗಳು ಗುಣಮಟ್ಟ ಹೊಂದಿವೆ ಎಂದು ಸೆಂಟ್ರಲ್ ಡ್ರಗ್ ಲ್ಯಾಬ್ ವರದಿ ನೀಡಿದೆ. ಅಲ್ಲದೇ 13 ಬ್ಯಾಚ್ ಗಳ ಬಗ್ಗೆ ಸೆಂಟ್ರಲ್ ಡ್ರಗ್ ಲ್ಯಾಬ್ ನಿಂದ ವರದಿ ಬರಬೇಕಿದೆ ಎಂದು ಸ್ಪಷ್ಟನೆ ನೀಡಿದರು. ಉಳಿದ 9 ಬ್ಯಾಚ್ ಗಳ ವಿಚಾರವಾಗಿ ಕಂಪನಿಯವರನ್ನ ಪ್ರಾಸಿಕ್ಯೂಷನ್ ಗೆ ಒಳಪಡಿಸಬಹುದಲ್ಲ ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್ ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ.. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ.. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು.

pushpa 2:ಪುಷ್ಪ ಸಿನಿಮಾ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರು #pratidhvani #pushpa2

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಭ ನೀತಿ ಏಕೆ. ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ. ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.

ಐವಿ ರಿಂಗರ್ ಲ್ಯಾಕ್ಟೇಟ್ ನ 192 ಬ್ಯಾಚ್ ಗಳಲ್ಲಿ ಟೆಸ್ಟಿಂಗ್ ಗೆ ಬಾಕಿ ಇರುವ ಬ್ಯಾಚ್ ಗಳ ವರದಿ ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಾಕೀತು ಮಾಡಿದರು. ಅಲ್ಲದೇ NABL ಲ್ಯಾಬ್ ನಲ್ಲಿ 192 ಬ್ಯಾಚ್ ಗಳು ಐವಿ ದ್ರಾವಣ ಪಾಸಿಟಿವ್ ರಿಪೋರ್ಟ್ ಬಂದಿದ್ದು ಹೇಗೆ ಎಂದು ಪ್ರಶ್ನಿಸಿದ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಎಂದರು. ರಾಜ್ಯದ ಡ್ರಗ್ ಕಂಟ್ರೋಲ್ ನೀಡಿದ ವರದಿಯಲ್ಲಿ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿಯಿದೆ.

ಇದರಲ್ಲಿ ಸೆಂಟ್ರಲ್ ಲ್ಯಾಬ್ ನವರು 4 ಬ್ಯಾಚ್ ಗಳಿಗೆ ಮಾತ್ರ ಗುಣಮಟ್ಟ ಹೊಂದಿದೆ ಎಂದು ವರದಿ ನೀಡಿದ್ದಾರೆ. ಆದರೆ NABL ಲ್ಯಾಬ್ ನವರು 192 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿದೆ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಈ ಬಗ್ಗೆ ಪರಿಶೀಲನೆ ನಡೆಸಿ. ಲ್ಯಾಬ್ ನವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಔಷಧಿ ಸರಬರಾಜು ನಿಗಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

Tags: 22 batchesBellaryConduct drug testing on timedrug control authoritiesIV infusionIV solutionMinister Dinesh Gunduraourges Drug Control Officers*
Previous Post

ಅಸ್ಸಾಂ ನಲ್ಲಿ ಗೋಮಾಂಸ ನಿಷೇಧ ! ಹೋಟೆಲ್ & ರೆಸ್ಟೋರೆಂಟ್ ಗಳಲ್ಲಿ ಗೋಮಾಂಸ ಸೇವಿಸುವಂತಿಲ್ಲ !

Next Post

ಈ ವಾರ ಬಿಡುಗಡೆ.ಕರಿಗಿರಿ ಫಿಲ್ಮ್ಸ್ ನ “ಹರಿದಾಸರ ದಿನಚರಿ”:

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಈ ವಾರ ಬಿಡುಗಡೆ.ಕರಿಗಿರಿ ಫಿಲ್ಮ್ಸ್ ನ "ಹರಿದಾಸರ ದಿನಚರಿ":

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada