ಬೀದರ್: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ಹೋರಾಟ ತೀವ್ರಗೊಳಿಸಲು ದೆಹಲಿಯಲ್ಲಿ ಜು. 22 ರಂದು ರಾಷ್ಟ್ರೀಯ ರೈತ ಮುಖಂಡರ ಸಮಾವೇಶ ನಡೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ ಸಂಘಟನೆಯ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ (kurubur shanthakumar) ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಬಗ್ಗೆ ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.ರೈತ ಹೋರಾಟದಿಂದ ಎಚ್ಚೆತ್ತುಕೊಂಡು ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಪ್ರಧಾನಿ ಮೋದಿ ಸರ್ಕಾರ, ಡಾ. ಸ್ವಾಮಿನಾಥನ್ ಆಯೋಗದ ವರದಿಯಂತೆ ಎಂ ಎಸ್ಪಿ ಖಾತ್ರಿ ಕಾನೂನು ಜಾರಿಗೆ ತರಲು ಸಮಿತಿಯನ್ನು ರಚಿಸಿ ಎರಡು ವರ್ಷವಾದರೂ ಕಾರ್ಯರೂಪಕ್ಕೆ ತಂದಿಲ್ಲ. ಈ ಬಗ್ಗೆ ವಿಪಕ್ಷಗಳು ಸಂಸತ್ ನಲ್ಲಿ ಖಾಸಗಿ ಮಸೂದೆ ಮಂಡಿಸುವಂತೆ ದೇಶಾದ್ಯಂತ ರೈತ ಸಂಘಟನೆಗಳು ಈಚೆಗೆ ಸಂಸದರಿಗೆ ಮನವಿ ಪತ್ರ ನೀಡಿ ಒತ್ತಾಯಿಸಲಾಗಿದೆ ಎಂದು ಹೇಳಿದರು.ಕಾಡಂಚಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳು ರೈತರ ಬೆಳೆಗಳನ್ನು ಹಾಳು ಮಾಡುತ್ತಿದ್ದು ಅರಣ್ಯ ಇಲಾಖೆ ಬೇಜವಾಬ್ದಾರಿತನ ತೋರುತ್ತಿದೆ. ಈ ಬಗ್ಗೆ ಅರಣ್ಯ ಸಚಿವರು ಈಶ್ವರ್ ಖಂಡ್ರೆ ಕೂಡಲೇ ರಾಜ್ಯಮಟ್ಟದಲ್ಲಿ ರೈತ ಮುಖಂಡರು ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಅರಿತುಕೊಂಡು ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಬೆಳೆ ವಿಮೆ ಕಟ್ಟಿರುವ ರೈತರಿಗೆ ಪರಿಹಾರದ ಹಣ ನ್ಯಾಯಯುತವಾಗಿ ಬರುತ್ತಿಲ್ಲ. ವಿಮಾ ಕಂಪನಿಗಳು ರೈತರ ಕಣ್ಣಿಗೆ ಮಣ್ಣೆರಚುತಿದ್ದಾರೆ. ನಕಲಿ ಬಿತ್ತನೆ ಬೀಜ, ನಕಲಿ ಗೊಬ್ಬರ, ನಕಲಿ ಕೀಟ ಕೀಟನಾಶಕ, ಮಾರಾಟಕ್ಕೆ ತಡೆಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.ಪತ್ರಿಕಾಗೋಷ್ಟಿಯಲ್ಲಿ ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಶಿವರಾಜ್ ಪಾಟೀಲ್ ಹತಿವಾಳ, ರಾಜ್ಯ ಉಪಾಧ್ಯಕ್ಷ ಬಸವರಾಜ ಪಾಟೀಲ್, ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ ಹಾಗೂ ಅವಿನಾಶ ಇದ್ದರು.
ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ:ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ:"ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಇನ್ನೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದಾನೆ.ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲೆಸೆದರು.ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...
Read moreDetails