ಮೈಸೂರು : ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂತನವಾಗಿ ಆಯ್ಕೆಯಾಗಿರುವ ಶಾಸಕರನ್ನು ಮೆಟ್ರೊಫೋಲ್ ವೃತ್ತದಿಂದ ಕಾಂಗ್ರೆಸ್ ಕಚೇರಿಯವರೆಗೆ ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯ್ತು.
ಹೆಚ್ಚು ಓದಿದ ಸ್ಟೋರಿಗಳು



ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ನಡೆಸಿದರು. ಹೆಚ್ ಡಿ ಕೋಟೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಅನಿಲ್ ಚಿಕ್ಕಮಾದು, ಚಾಮರಾಜದಿಂದ ಮೊದಲ ಬಾರಿ ಆಯ್ಕೆಯಾಗಿರುವ ಹರೀಶ್ ಗೌಡ, ಕೆ.ಆರ್.ನಗರದಿಂದ ಮೊದಲ ಬಾರಿ ಆಯ್ಕೆಯಾಗಿರುವ ಡಿ.ರವಿಶಂಕರ್, ನಂಜನಗೂಡು ಕ್ಷೇತ್ರದಿಂದ ಮೊದಲ ಬಾರಿ ಆಯ್ಕೆಯಾಗಿರುವ ದರ್ಶನ್ ಧ್ರುವನಾರಾಯಣ್ ಅಭಿನಂದನಾ ಸಮಾರಂಭದಲ್ಲಿ ಉಪಸ್ಥಿತಿ. ಎಂಎಲ್ಸಿ ಡಾ.ಡಿ.ತಿಮ್ಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗಿ.