ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಲ್ಲ ನಾಯಕರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಳ್ಳಲಾಯಿತು
ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಲ್ಲ ನಾಯಕರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಳ್ಳಲಾಯಿತು. ಚಾಮರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ರಾಜು, ಮಾಜಿ ಉಪ ಮೇಯರ್ ಶ್ರೀರಾಮೇಗೌಡ, ಪಾಲಿಕೆಯ ಮಾಜಿ ಸದಸ್ಯರಾದ ಗೌರಮ್ಮ, ಕಾಂಗ್ರೆಸ್ ಪಕ್ಷದ ನಾಯಕರಾದ ಶೇಖರ್, ದೊರೆ ಸೇರಿ 53ಕ್ಕು ಹೆಚ್ಚು ವಿವಿಧ ಪಕ್ಷಗಳ ಮುಖಂಡರು ಪಕ್ಷವನ್ನು ಸೇರಿದರು.