ಪಂಚ ರಾಜ್ಯ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಪ್ರಚಾರ ನಡೆಸುತ್ತಿವೆ. ಪಕ್ಕದ ರಾಜ್ಯ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಇದ್ದು, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು, ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ತೆಲಂಗಾಣದ ಜನರು ಮರುಳಾಗಬಾರದು ಎಂದು ಕಾಂಗ್ರೆಸ್ ವಿರುದ್ಧ ಟೀಕೆಗಳ ಸುರಿಮಳೆ ಸುರಿಸಿದ್ದಾರೆ.
ತೆಲಂಗಾಣದಲ್ಲಿ ಚುನಾವಣ ಪ್ರಚಾರದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,” ಕರ್ನಾಟಕ ಮಾದರಿ ಇತರ ರಾಜ್ಯಗಳಲ್ಲಿ ಕಾಂಗ್ರೆಸ್ನ ಚುನಾವಣ ಮಾದರಿಯಾಗಿದೆ. ಅಧಿಕಾರಕ್ಕೆ ಬಂದ ನಂತರ ತನ್ನ ಐದು ಚುನಾವಣ ಪೂರ್ವ ಗ್ಯಾರಂಟಿಗಳನ್ನು ಜಾರಿಗೊಳಿಸದೆ ಕರ್ನಾಟಕದ ಜನರನ್ನು ವಂಚಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಮರುಳಾಗಬೇಡಿ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2023/11/421014-yediyurappa-hyderabad.webp)
ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಿಂದ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.