2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು, ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು ಕೂಡ ಕಾಂಗ್ರೆಸ್,(congress) ಬಿಜೆಪಿ ರಾಷ್ಟ್ರ ನಾಯಕರು ರಾಜ್ಯದಲ್ಲಿ ಮತಬೇಟೆ ಮುಂದವರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭರ್ಜರಿ ಮತಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಅಣ್ಣಾಮಲೈ,(annamalai) ಸಚಿವೆ ಸ್ಮೃತಿ ಇರಾನಿ, ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್(kiccha sudeep) ಕೂಡ ಪ್ರಚಾರಕ್ಕಿಳಿದ್ದಾರೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ(pm narendra modi) ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೂಡಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1.15 ಕ್ಕೆ ಅಂಕೋಲಾದಲ್ಲಿ, ಮಧ್ಯಾಹ್ನ 3.15 ಕ್ಕೆ ಬೈಲಹೊಂಗಲದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಸಂಜೆ 4.40ಕ್ಕೆ ಬೆಳಗಾವಿಯಿಂದ(belagavi) ದೆಹಲಿಗೆ ಮೋದಿ ನಿರ್ಗಮಿಸಲಿದ್ದಾರೆ. ಬೆಂಗಳೂರಿನಲ್ಲಿ(bangalore) ಕೇಂದ್ರ ಸಚಿವೆ ಸ್ಮೃತಿ ಇರಾನಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಬ್ಯಾಟರಾಯನಪುರ(byatarayanapura) ಕ್ಷೇತ್ರದಲ್ಲಿ ಅಸೋಸಿಯೇಷನ್ ಸಭೆ ನಡೆಸಿ ರಾತ್ರಿ 7 ಗಂಟೆಗೆ ಜಯನಗರದಲ್ಲಿ(jayanagar) ಮಹಿಳಾ ಉದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ. ಹಾಗೂ ರಾಜ್ಯ ಬಿಜೆಪಿ ಸಹ ಚುನಾವಣಾ(election) ಉಸ್ತುವಾರಿ ಅಣ್ಣಾಮಲೈ ಬೆಂಗಳೂರಿನಲ್ಲಿ ಮತಬೇಟೆ ನಡೆಸಲಿದ್ದಾರೆ.
ರಾಯಚೂರು,(raichur) ಯಾದಗಿರಿ ಸೇರಿ ಎರಡೂ ಜಿಲ್ಲೆಗಳ ವಿವಿಧೆಡೆ ನಟ ಕಿಚ್ಚ ಸುದೀಪ್(kiccha sudeep) ರೋಡ್ಶೋ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ರಾಯಚೂರು ಜಿಲ್ಲೆ ಲಿಂಗಸುಗೂರು ಕ್ಷೇತ್ರದಲ್ಲಿ ರೋಡ್ಶೋ ನಡೆಸೆ ಬೆಳಗ್ಗೆ 11.30ಕ್ಕೆ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 2.40ಕ್ಕೆ ಶಹಾಪುರ ಕ್ಷೇತ್ರದಲ್ಲಿ ರೋಡ್ಶೋ ನಡೆಸಿ ಸಂಜೆ 4.30ಕ್ಕೆ ಯಾದಗಿರಿ ಕ್ಷೇತ್ರದಲ್ಲಿ ರೋಡ್ಶೋ ನಡೆಸಲಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS yediyurappa) ಬೆಳಗ್ಗೆ 10.45ಕ್ಕೆ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.25ಕ್ಕೆ ಔರಾದ್ ಕ್ಷೇತ್ರದಲ್ಲಿ ಸಾರ್ವಜನಿಕ ಪ್ರಚಾರ(campaign ಸಭೆ ನಡೆಸಿ ಮಧ್ಯಾಹ್ನ 3.20ಕ್ಕೆ ಶಹಾಪುರ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. ಸಂಜೆ 5 ಗಂಟೆಗೆ ಗುರುಮಿಠಕಲ್ ಕ್ಷೇತ್ರದಲ್ಲಿ ಪ್ರಚಾರ ನಡೆಯಲಿದೆ.