• Home
  • About Us
  • ಕರ್ನಾಟಕ
Tuesday, December 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

ರಾಜ್ಯದ ಗೃಹ ಸಚಿವರು ರಾಜೀನಾಮೆ ನೀಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
December 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೊತ್ತಿಲ್ಲ ಸಚಿವರೇ ರಾಜೀನಾಮೆ ಕೊಟ್ಟು ನಡೆಯಿರಿ ಪೋಸ್ಟರ್’ ಅನ್ನು ಅವರು ಬಿಡುಗಡೆಗೊಳಿಸಿದರು. ಗೃಹ ಸಚಿವರೇ ಸಬೂಬುಗಳನ್ನು ಹೇಳಿಕೊಂಡು ಎಷ್ಟು ದಿನ ಈ ರಾಜ್ಯವನ್ನು ಹಾಳು ಮಾಡುತ್ತೀರಿ? ನೀವು ಅಧಿಕಾರ ಬಿಟ್ಟು ಕೊಡಿ. ಬೇರೆ ಯಾರಿಗಾದರೂ ತಾಕತ್ತಿದ್ದರೆ ಆಡಳಿತ ನಡೆಸಲಿ ಎಂದು ಒತ್ತಾಯಿಸಿದರು. ಡಾ. ಪರಮೇಶ್ವರ್ ಅವರೇ, ಇದು ನಿಮ್ಮ ಅಸಹಾಯಕತೆಯೇ? ಅಥವಾ ಬೇರೆಯವರು ನಿಮಗೆ ಕೆಟ್ಟ ಹೆಸರು ತರಲು ನಿಮ್ಮ ವಿರುದ್ಧವಾಗಿ ಮಾಡಿದ ಷಡ್ಯಂತ್ರವೇ ಎಂದು ಹೇಳಿ ಎಂದು ಆಗ್ರಹವನ್ನು ಮುಂದಿಟ್ಟರು.

ADVERTISEMENT

ರಾಜ್ಯದಲ್ಲಿ ಡ್ರಗ್ ಮಾಫಿಯ ಸಂಚಲನವನ್ನೇ ಸೃಷ್ಟಿ ಮಾಡಿದೆ. ಈ ಮಾಫಿಯಕ್ಕೆ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಅವಕಾಶ ಕಲ್ಪಿಸುವ ಮೂಲಕ ಕಾಂಗ್ರೆಸ್ ಸರಕಾರವೇ ಡ್ರಗ್ ಸರಕಾರವಾಗಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಡ್ರಗ್ ಕಾರ್ಖಾನೆ ತಲೆ ಎತ್ತಿರುವುದು ಹೊರಕ್ಕೆ ಬರುತ್ತಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮೊದಲಿನಿಂದ ತಿಳಿಸಿ, ನಿದರ್ಶನ ನೀಡಿದ್ದೇವೆ. ಅತ್ಯಾಚಾರಗಳು ನಡೆಯುತ್ತಿದ್ದವು. ಎಷ್ಟೋ ಪ್ರಾಣಹಾನಿಗಳಾದವು. ಹತ್ಯೆಗಳೂ ನಡೆದವು. ಆದರೆ, ತಡೆಯಲು ಈ ಸರಕಾರದಿಂದ ಆಗಲಿಲ್ಲ ಎಂದು ಟೀಕಿಸಿದರು.

ಸರಕಾರವೇ ಡ್ರಗ್ ದಂಧೆ ಮಾಡಿಸುತ್ತಿದೆಯೇ
ಸರಕಾರವೇ ಡ್ರಗ್ ದಂಧೆ ಮಾಡಿಸುತ್ತಿದೆಯೇ ಎಂದು ಅನುಮಾನ ಬರುತ್ತಿದೆ ಎಂದು ಆರೋಪಿಸಿದರು. ಡ್ರಗ್ ಪೆಡ್ಲರ್‍ಗಳನ್ನು ನಮ್ಮ ಸರಕಾರ ಹಿಡಿಯುವುದಿಲ್ಲ. ಮೈಸೂರು, ಬೆಂಗಳೂರಿನ 3 ಕಡೆ ಮಾದಕವಸ್ತು ಕಾರ್ಖಾನೆಗಳ ಮೇಲೆ ಮಹಾರಾಷ್ಟ್ರದ ಪೊಲೀಸರು ದಾಳಿ ಮಾಡಬೇಕಾಯಿತು ಎಂದು ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ರಾಜ್ಯದ ಗೃಹ ಇಲಾಖೆ ಸತ್ತು ಹೋಗಿದೆಯೇ? ಬೇಹುಗಾರಿಕಾ ದಳ, ನಮ್ಮ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಮಹಾರಾಷ್ಟ್ರ ಪೊಲೀಸರು ಇದನ್ನು ಪತ್ತೆ ಹಚ್ಚಿದ ಬಳಿಕ ಇಲ್ಲಿನ ಕಾಂಗ್ರೆಸ್ ಸರಕಾರ ನಾವು ಹಿಡಿದಿದ್ದೇವೆ ಎಂದು ತಿಳಿಸಿ, ಘನ ಕಾರ್ಯ ಮಾಡಿದಂತೆ ವರ್ತಿಸುತ್ತದೆ ಎಂದು ಆರೋಪಿಸಿದರು.

ಮಾದಕವಸ್ತು ಮಾರಾಟ ಅಡ್ಡೆಗಳಿಗೆ ಸರಕಾರದ ಕುಮ್ಮಕ್ಕು..
ಮಾದಕವಸ್ತು ಮಾರಾಟ ಅಡ್ಡೆಗಳಿಗೆ ಸರಕಾರದ ಕುಮ್ಮಕ್ಕಿದೆ. ಗಂಧದ ನಾಡು ಗಾಂಜಾ ಬೀಡಾಗಿದೆ. ವಿದ್ಯಾರ್ಥಿಗಳು ಕಾಲೇಜಿಗೆ ಹೋಗಬೇಕೇ ಬೇಡವೇ ಎಂಬ ಪರಿಸ್ಥಿತಿ ಬಂದಿದೆ. ಆ್ಯಂಟಿ ನಕ್ಸಲ್ ದಳದ ಕೆಲಸ ಮುಗಿದುಹೋಗಿದೆ. ಅದನ್ನು ಆ್ಯಂಟಿ ಡ್ರಗ್ಸ್ ದಳವಾಗಿ ಮಾಡಿ ಮಾದಕವಸ್ತು ಜಾಲದ ಸಂಪೂರ್ಣ ಮೂಲೋತ್ಪಾಟನೆ ಮಾಡಿ ಎಂದು ಒತ್ತಾಯಿಸಿದರು. ಒಟ್ಟಾರೆ ಕಾಂಗ್ರೆಸ್ ಸರಕಾರವು ಈ ರಾಜ್ಯವನ್ನು ಸಂಪೂರ್ಣ ಹದಗೆಡಿಸಿದೆ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳು ತಕ್ಷಣ ಕಾರ್ಯೋನ್ಮುಖವಾಗಲಿ. ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ರಾಜೀನಾಮೆ ಕೊಡಬೇಕೇ ಎಂದು ಅವರೇ ತೀರ್ಮಾನಿಸಲಿ ಎಂದು ತಿಳಿಸಿದರು.

ರಾಜ್ಯದ ಜನರು ತಲೆ ಬಗ್ಗಿಸುವಂತೆ ಮಾಡದಿರಿ..
ಬೆಂಗಳೂರಿನ ಕೋಗಿಲು ಲೇಔಟ್‍ನಲ್ಲಿ ಬೇರೆಯವರ ಜಾಗದಲ್ಲಿ ಗುಡಿಸಲು ಹಾಕಿದವರನ್ನು ಬುಲ್‍ಡೋಜರ್ ತೆರವುಗೊಳಿಸುವ ಕಾರ್ಯವನ್ನು ಸರಕಾರ ಮಾಡಿದೆ. ಈಗ ಕೇರಳದ ಮುಖ್ಯಮಂತ್ರಿಗಳು ಬುಲ್‍ಡೋಜರ್ ಸಂಸ್ಕøತಿಯ ಮಾತನಾಡಿದ್ದಾರೆ. ಈಗ ಕೃಷ್ಣಬೈರೇಗೌಡರು, ಅನುಮತಿ ನೀಡಿದ್ದ ಮುಖ್ಯಮಂತ್ರಿಗಳು ಮಾತನಾಡುತ್ತಿಲ್ಲ. ಕೇರಳದವರಿಗೆ ಇಲ್ಲೇನು ಕೆಲಸ? ಕೇರಳದ ಜನರು ಪ್ರಜ್ಞಾವಂತರು. ಇಲ್ಲಿ ನಡೆಯುವ ರಾಜಕೀಯ ಏನು? ಎಂದು ಕೇಳಿದರು. ಇಲ್ಲಿನ ಸರಕಾರ ಅತ್ಯಂತ ದುರ್ಬಲವಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು.

ನೀವು ವೇಣುಗೋಪಾಲ್ ಅಥವಾ ಪಿಣರಾಯಿ ವಿಜಯನ್ ಸರಕಾರದ ಗುಲಾಮರಾದರೂ ಆಗಿರಿ; ನನ್ನ ರಾಜ್ಯದ ಜನರನ್ನು ಇನ್ನೊಬ್ಬರ ಮುಂದೆ ತಲೆ ಬಗ್ಗಿಸುವಂತೆ ಮಾಡದಿರಿ ಎಂದು ಎಚ್ಚರಿಸಿದರು. ಕರ್ನಾಟಕದ ಆಡಳಿತದ ವಿಚಾರದಲ್ಲಿ ತಲೆ ಹಾಕಲು ವೇಣುಗೋಪಾಲ್ ಯಾರು ಎಂದು ಕೇಳಿದರು. ಜಮೀರ್ ಅಹ್ಮದ್ ಭೇಟಿ ಕೊಟ್ಟು ‘ಕಲ್ ಶ್ಯಾಮ್ ತಕ್ ಆಪ್ ಕೋ ಮೀಠಾ ಖಬರ್ ಮಿಲ್ ಜಾಯೇಗ’ ಎಂದಿದ್ದಾರೆ. ಇದು ಸರಕಾರದ ವ್ಯವಸ್ಥಿತ ಪಿತೂರಿಯಂತಿಲ್ಲವೇ ಎಂದು ಕೇಳಿದರು. ಬಾಂಗ್ಲಾ ದೇಶದವರಿಗೆ ಮನೆ ಕೊಡುವುದಾದರೆ, ಇಲ್ಲಿ ಮನೆ ಕಳಕೊಂಡವರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಅವರು ಯಾರು ಎಂದು ಪರಿಶೀಲಿಸಿ ಎಂದು ಆಗ್ರಹಿಸಿದರು. ಇದೇನು ಗುಜರಿ ಸರಕಾರವೇ? ಹಣ ಪಡೆದುಕೊಂಡ ವಾಸೀಂ ಅನ್ನು ಬಂಧಿಸಿಲ್ಲವೇಕೆ? ಇದೆಂಥ ಗುಲಾಮಗಿರಿ ಸರಕಾರ ಎಂದು ಕೇಳಿದರು.

ಈ ಕೇಸನ್ನು ಎನ್‍ಐಎಗೆ ಒಪ್ಪಿಸಿ..
ಇವರೆಲ್ಲ ರೋಹಿಂಗ್ಯಾಗಳು ಎಂಬ ಮಾಹಿತಿ ಇದೆ. ಈ ಕೇಸನ್ನು ಎನ್‍ಐಎಗೆ ಒಪ್ಪಿಸಿ ಎಂದು ಆಗ್ರಹಿಸಿದರು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಕೊಡಬೇಡಿ ಎಂದು ತಿಳಿಸಿದರು. ಕೆ.ಸಿ.ವೇಣುಗೋಪಾಲ್ ಟ್ವೀಟ್ ಬಳಿಕ ನಿಮ್ಮ ಬಟ್ಟೆಯಲ್ಲ ಒದ್ದೆಯಾಗಿದೆ ಎಂದು ವ್ಯಂಗ್ಯವಾಡಿದರು. ಕೋಗಿಲು ಗುಡಿಸಲು ಕಳಕೊಂಡವರಿಗೆ ಕಾನೂನುಬಾಹಿರವಾಗಿ ಮನೆ ಕೊಟ್ಟರೆ ಇಡೀ ರಾಜ್ಯದಲ್ಲಿ ಈ ರೀತಿ ವಸತಿಹೀನರಾದವರಿಗೆ ಮನೆ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೆಬ್ಬಾಳ ಬ್ರಿಡ್ಜ್ ಪಕ್ಕದಲ್ಲಿ 200 ಗುಡಿಸಲುಗಳಿದ್ದು, ಅಲ್ಲಿ ಗಾಂಜಾ, ಡ್ರಗ್ಸ್‍ದಂಧೆ ನಡೆಯುತ್ತಿದೆ. ಇದನ್ನು ತಿಳಿಸಿದರೂ ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಅವರಲ್ಲಿ ಮತದಾರರ ಚೀಟಿ, ರೇಷನ್ ಕಾರ್ಡಿದೆ. ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣವಾಗಿದೆ ಎಂದು ದೂರಿದರು.
ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಬಿಜೆಪಿ ಮುಖಂಡ ಆರ್.ರುದ್ರಯ್ಯ ಅವರು ಉಪಸ್ಥಿತರಿದ್ದರು.

Tags: bangalore policeBJPChalavadi NarayanaswamyCommissionercongressDK ShivakumarDr G ParameshwarDrug PledlersKogiluMaharastraSrinivaspura
Previous Post

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ ಸಿಎಂ ಸಿದ್ದರಾಮಯ್ಯ..

Next Post

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

December 30, 2025
Next Post
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

Recent News

https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!