2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, ರಾಜಕೀಯ ನಾಯಕರು ಅಖಾಡಕ್ಕಿಳಿದು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿರುವ ಘಟನೆ, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ. ಜಿ. ಪರಮೇಶ್ವರ್ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು.

ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆಯಲಾಗಿದೆ ಎನ್ನಲಾಗುತ್ತಿದೆ. ಕೂಡಲೇ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.