• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 9, 2021
in ಕರ್ನಾಟಕ, ರಾಜಕೀಯ
0
ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ADVERTISEMENT

ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಚಾರವಾಗಿ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್. ‘ಅಶೋಕ್ ಅವರು ನಮ್ಮ ಅಭ್ಯರ್ಥಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್ ಗೆ ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಯಾಕೆ ಸುಳ್ಳು ಹೇಳಬೇಕು? ಅದರ ಅಗತ್ಯ ನಮಗೇನಿದೆ? ಬೇಕಿದ್ದರೆ ಅಶೋಕ್ ಮನಗೂಳಿ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.

ʼʼ15 ದಿನಗಳ ಹಿಂದೆ ಭೇಟಿ ಮಾಡಿದ್ದರು ಅಂದರೆ ಕ್ಯಾಲೆಂಡರ್ ತೆಗೆದುಕೊಂಡು ಲೆಕ್ಕಹಾಕಿ ಹೇಳಿಲ್ಲ. ಅವರು ಸಾಯುವ ಸ್ವಲ್ಪ ದಿನಗಳ ಮೊದಲು ಭೇಟಿ ಮಾಡಿದ್ದರು. ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್ ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ.‌ಆ ನೋವಿನಿಂದ ಮಾತನಾಡಿದ್ದಾರೆ. ಅದಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲʼʼ ಎಂದಿದ್ದಾರೆ.

ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲಾ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಬಂದಿದ್ದರು. ಅದೇ ರೀತಿ ಮನಗೂಳಿ ಅವರು ಸಾಯುವ ಮುನ್ನ ನನ್ನನ್ನು ಭೇಟಿ ಮಾಡಿದ್ದು ನಿಜ. ಆಗ ಅವರ ಪುತ್ರ ಅಶೋಕ್ ಅವರು ಇದ್ದದ್ದೂ ನಿಜ. ನಾವು ಯಾರ ಮತವನ್ನೂ ಗುತ್ತಿಗೆಗೆ ತೆಗೆದುಕೊಂಡಿಲ್ಲ. ನನ್ನ ಮತವನ್ನೇ ನಾನು ಗುತ್ತಿಗೆ ತೆಗದುಕೊಳ್ಳಲು ಆಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಗೌಪ್ಯವಾಗಿ ಮತ ಹಾಕುತ್ತಾರೆ ಎಂದು ಡಿಕೆಶಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಐಟಿ ಇಲಾಖೆ ಮಾಹಿತಿ ಬರುವವರೆಗೂ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ:

ಬಿಎಸ್‌ವೈ ಆಪ್ತರ ಮೇಲಿನ ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಡಿಕೆಶಿ, ‘ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ ಸಿಕ್ಕಿದೆ ಎಂದು ಮಾಹಿತಿ ಬರುವವರೆಗೂ ಮಾತನಾಡಲು ಸಾಧ್ಯವಿಲ್ಲ. ಆಂತರಿಕ ರಾಜಕೀಯ ಇದ್ದೇ ಇರುತ್ತದೆ ಎಂದಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅವರು ಯಾರನ್ನಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದರೆ ಅದನ್ನು ಮಾಡುತ್ತಾರೆ. ಆತ ಯಡಿಯೂರಪ್ಪ ಅವರ ಆಪ್ತ ಸಹಾಯಕ ಅಲ್ಲ ಎಂದು ಹೇಳಲು ಸಾಧ್ಯವಿಲ್ಲ ಅಲ್ಲವೇ? ಕೇವಲ ಅವರು ಮಾತ್ರವಲ್ಲ. ಈ ಹಿಂದೆ ಇದ್ದ ಮಾಜಿ ನೀರಾವರಿ ಮಂತ್ರಿಗಳ ಮೇಲೆ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಬಂದಿದೆ. ಕೆಲವು ಮಂತ್ರಿಗಳು ಕೂಡ ನಮ್ಮ ಮನೆ ಮೇಲೆ ದಾಳಿ ಮಾಡಬೇಡಿ ಎಂದು ದೆಹಲಿಯಲ್ಲಿ ಹೋಗಿ ಮನವಿ ಮಾಡಿದ್ದರು ಎಂಬ ಮಾಹಿತಿ ಇದೆ. ಐಟಿ ದಾಳಿ ಒಂದೆರಡು ದಿನಗಳಲ್ಲಿ ಮಾಡುವ ವಿಚಾರವಲ್ಲ. ಇದರ ಹಿಂದೆ ಪ್ಲಾನ್ ಇರುತ್ತದೆ. ಕೆಲವರನ್ನು ರಕ್ಷಣೆ ಮಾಡುತ್ತಿದ್ದಾರೆ. ನೀರಾವರಿ ಇಲಾಖೆಗೆ ಸಂಬಂಧಿಸಿದ ದಾಳಿ ಎಂದರೆ ಕಳೆದೊಂದು ವರ್ಷದಿಂದ ಏನೇನಾಗಿದೆ ಎಂಬ ಮಾಹಿತಿ ಇರುತ್ತದೆ. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯೂ ಇದೆ ಎಂದಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ನಮಗೆ ಉತ್ತಮ ಬೆಂಬಲ:

ಇದೇ ವೇಳೆ ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಕುರಿತು ಮಾತನಾಡಿದ ಡಿಕೆಶಿ, ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿದ್ದಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ. ನಾವು ನಿತ್ಯ ಆಂತರಿಕ ವರದಿ ಪಡೆಯುತ್ತಿರುತ್ತೇವೆ. ಮುಖ್ಯಮಂತ್ರಿಗಳಿಗೂ ನಿತ್ಯ ವರದಿ ಹೋಗುತ್ತಿರುತ್ತದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ಮಾಹಿತಿಯೇ ಮುಖ್ಯಮಂತ್ರಿಗಳಿಗೆ ರವಾನೆಯಾದ ವರದಿಯಲ್ಲೂ ಇದೆ ಎಂದಿದ್ದಾರೆ.

ರಮೇಶ್ ಆಪ್ತರು ನನ್ನ ಭೇಟಿ ಮಾಡಿದ್ದು ನಿಜ:

ರಮೇಶ್ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂಧು ಹೇಳಿದ್ದಾರೆ.

Tags: BJPBy-electionCongress PartyCovid 19D K ShivakumarhanagalJDSJDS Karnatakasindhagiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಖಿಂಪುರ ಹಿಂಸಾಚಾರ: ಸಚಿವ ಅಜಯ್ ಮಿಶ್ರಾನನ್ನು ವಜಾಗೊಳಿಸಬೇಕು. :ಯೂತ್ ಕಾಂಗ್ರೆಸ್ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ

Next Post

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಪತ್ರಿಕಾ ಗೋಷ್ಠಿ

Related Posts

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?
Top Story

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

by ಪ್ರತಿಧ್ವನಿ
August 23, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಇನ್ನೂ ಕೆಲ ಆರೋಪಿಗಳು...

Read moreDetails
ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

August 23, 2026
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

August 23, 2026
ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

August 23, 2026
ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

ರಾಜ್ಯದಲ್ಲಿ ಬರದ ಛಾಯೆ: ಮಳೆಗಾಗಿ ಕೊಡಗಿನಲ್ಲಿ ಕೃಷಿ ಸಚಿವರಿಂದ ವಿಶೇಷ ಪೂಜೆ

August 23, 2026
Next Post
ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಪತ್ರಿಕಾ ಗೋಷ್ಠಿ

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಪತ್ರಿಕಾ ಗೋಷ್ಠಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada