• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
July 5, 2026
in Top Story, ಕರ್ನಾಟಕ, ರಾಜಕೀಯ
0
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ
Share on WhatsAppShare on FacebookShare on Telegram

ರಾಮನಗರ: ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಭಾಗವಾಗಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಮೀಕ್ಷೆಗೆ ಅಗತ್ಯವಿರುವ ದಾಖಲೆ ಮತ್ತು ಮಾಹಿತಿಯನ್ನು ನೀಡಿದರು.

ADVERTISEMENT
R Ashok : ಡಿಕೆ ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳು ಆಯ್ತು. #pratidhvani

ಸಚಿವರೊಂದಿಗೆ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು, ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಅವರ ಪತ್ನಿ ರೇವತಿ ನಿಖಿಲ್ ಅವರು ಕೂಡ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಅಧಿಕಾರಿಗಳಿಗೆ ಅಗತ್ಯ ದಾಖಲೆ ಮತ್ತು ಮಾಹಿತಿಯನ್ನು ನೀಡಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕೇತಗಾನಹಳ್ಳಿಯ ನನ್ನ ತೋಟದ ಮನೆಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯಲ್ಲಿ (SIR) ಪ್ರಕ್ರಿಯೆಯಲ್ಲಿ ಕುಟುಂಬದೊಂದಿಗೆ ಪಾಲ್ಗೊಂಡು ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಯಿತು. ಈ ಪರಿಷ್ಕರಣೆ ಪಾರದರ್ಶಕವಾಗಿರಬೇಕು ಹಾಗೂ ನೈಜ ಮತದಾರರೆಲ್ಲರೂ ಮತದಾರರ ಪಟ್ಟಿಯಲ್ಲಿ ಉಳಿಯಲೇಬೇಕು ಎಂಬ ಆಶಯದೊಂದಿಗೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ. ನಾಡಿನ ಪ್ರತಿಯೊಬ್ಬರು SIR ಪ್ರಕ್ರಿಯೆಯಲ್ಲಿ ನಿಯಮಾನುಸಾರವಾಗಿ ತಪ್ಪದೇ ಪಾಲ್ಗೊಳ್ಳಬೇಕು. ಆ ಮೂಲಕ ಕೇಂದ್ರ ಚುನಾವಣಾ ಆಯೋಗ ಕೈಗೊಂಡಿರುವ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಕೋರುತ್ತೇನೆ ಎಂದರು.

Priyank Kharge Visits Bengaluru Central Prison: ಸರ್ ಜೈಲಲ್ಲಿ ದರ್ಶನ್ ನ ಭೇಟಿ ಮಾಡಿದ್ರಾ..? #pratidhvani

ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡುತ್ತಿದೆ. ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕೇಂದ್ರ ಚುನಾವಣಾ ಆಯೋಗದ ಆಶಯಗಳಿಗೆ ಎಳ್ಳುನೀರು ಬಿಟ್ಟು ರಾಜ್ಯ ಸರ್ಕಾರವು ನೇರವಾಗಿ ಅಕ್ರಮ ಮತ್ತು ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಕುಮ್ಮಕ್ಕು ನೀಡುತ್ತಿದೆ ಎಂದು ಕುಮಾರಸ್ವಾಮಿ ನೇರ ಆರೋಪ ಮಾಡಿದರು.

CM DKS ಒಂದು ತಿಂಗಳ ಸಾಧನೆ ಅಂದ್ರೆ ಜನರ ಜೇಬಿಗೆ ಪಿಕ್​ಪಾಕೇಟ್ ಎಂದ ಕೇಂದ್ರ ಸಚಿವ HDK #pratidhvani

ಅನೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಎಸ್ಐಆರ್ ದುರ್ಬಳಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವರು, ಈ ಕೂಡಲೇ ಕೇಂದ್ರ ಚುನಾವಣಾ ಆಯೋಗವು ಮಧ್ಯಪ್ರವೇಶ ಮಾಡಬೇಕು. ಪಶ್ಚಿಮ ಬಂಗಾಳದಲ್ಲಿ ಮಾಡಿದಂತೆಯೇ ರಾಜ್ಯದಲ್ಲಿಯೂ ಎಸ್ಐಆರ್ ಉಸ್ತುವಾರಿಗೆ ಹೊರ ರಾಜ್ಯದ ಅಧಿಕಾರಿಯನ್ನು ನೇಮಕ ಮಾಡಬೇಕು. ತಪ್ಪು ಮಾಡಿದ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Mummadi Nirvana Mahaswamiji Punya Samsmaranotsava: ಸೋಮಣ್ಣ ನನ್ನ ಆತ್ಮೀಯರು ಎಂದ ಡಿಕೆಶಿ #pratidhvani

ಇಡೀ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಚುನಾವಣೆ ಆಯೋಗದ ನಿಯಮಗಳಿಗೆ ಅನುಸಾರವಾಗಿ ನಡೆಸಬೇಕಾದ ಜಿಲ್ಲಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಅನೇಕರು ಸರ್ಕಾರದ ಮರ್ಜಿಗೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಈವರೆಗೂ ನಡೆಸಲಾಗಿರುವ ಸಮೀಕ್ಷೆಯನ್ನು ರದ್ದುಗೊಳಿಸಿ ಹೊಸದಾಗಿ ಸಮೀಕ್ಷೆಯನ್ನು ನಡೆಸಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸೇರಿ ದಾಖಲೆ ಸಮೇತ ದೂರು ನೀಡುತ್ತೇವೆ ಎಂದು ತಿಳಿಸಿದರು.

Lokayukta Raid Dr Sunilkumar Hebbi : ಜನರ ರಕ್ತ ಹೀರುವ ಭ್ರಷ್ಟರಿಗೆ ಇನ್ನು ಮುಂದೆ ಉಳಿಗಾಲವಿಲ್ಲ#pratidhvani

ಎಸ್ ಐಆರ್ ದುರ್ಬಳಕೆ ಬಗ್ಗೆ ಜಾಣ ಮೌನ ವಹಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಚಿವ ಕುಮಾರಸ್ವಾಮಿ ಪ್ರತಿ ವಿಷಯಕ್ಕೂ ಕಾಲು ಕೆರೆದು ಜಗಳಕ್ಕೆ ಬರುವ ಹಾಗೂ ಎಲ್ಲಕ್ಕೂ ಸ್ಟೇಟ್ ಮೆಂಟ್ ಮಾಡುವ ಗೃಹ ಸಚಿವರು ಎಸ್ ಐಆರ್ ದುರ್ಬಳಕೆ ಬಗ್ಗೆ ಮಾತನಾಡುತ್ತಲೇ ಇಲ್ಲ. ಪ್ರತಿ ವಿಷಯವನ್ನು ಕುಟುಕಿ ಕುಟುಕಿ ನೋಡುವ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲ. ನಿರಂತರವಾಗಿ ಅಕ್ರಮಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದರು.

Previous Post

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

Next Post

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

July 4, 2026
‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

‘ಗ್ರಾಮಾಯಣ’ ಚಿತ್ರಕ್ಕೆ ಕಾನೂನು ಸಂಕಷ್ಟ: ಲಹರಿ ವೇಲು ಸ್ಪಷ್ಟನೆ ಇಲ್ಲಿದೆ

July 4, 2026
Next Post
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada