ಬೆಂಗಳೂರು : ಬಿಜೆಪಿ ನಾಯಕರ ಭಾಷಣಗಳನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಇಂದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಚುನಾವಣಾ ಭಾಷಣ ಮಾಡುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ಹೆಚ್ಚಾಗುತ್ತದೆ ಎಂದು ಹೇಳಿದ್ದರು.
ಅಲ್ಲದೇ ಚಾಮರಾಜನಗರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ವಿ.ಸೋಮಣ್ಣ ಆಮೀಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಲಾಗಿದೆ.