ಬಿಜೆಪಿ ಸರ್ಕಾರದ (BJP government) ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ (COVID scam) ಸಂಬಂಧಪಟ್ಟಂತೆ ಚೀನಾದಿಂದ ಪಿಪಿಇ ಕಿಟ್ (PPE kit) ಖರೀದಿ ಮಾಡಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದರು. ಈ ಬಗ್ಗೆ ಮತ್ತೊಂದು ಹೆಜ್ಜೆ ಮುಂದಿಡಲು ಸರ್ಕಾರ ಮುಂದಾಗಿದ್ದು, ಯಡಿಯೂರಪ್ಪ ಮತ್ತು ಶ್ರೀ ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡುವ ಸಾಧ್ಯತೆ ನಿಚ್ಚಳವಾಗಿದೆ.
2019ರ ಕೋವಿಡ್ (Covid 19) ಸಂದರ್ಭದಲ್ಲಿ ಸ್ಥಳೀಯವಾಗಿಯೇ ಕಿಟ್ ಗಳನ್ನು ಖರೀದಿಸುವ ಅವಕಾಶವಿದ್ದರೂ ಕೂಡ ಅದನ್ನು ನಿರ್ಲಕ್ಷಿಸಿ, ಸುಮಾರು 3 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ ಗಳನ್ನು ಚೀನಾದಿಂದ (China) ಖರೀದಿಸಿದ್ದು, ಈ ವೇಳೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಖರೀದಿ ನಡೆದಿದೆ. ಜೊತೆಗೆ ಅಧಿಕ ಬೆಲೆ ಕೊಟ್ಟು ಪಿಪಿಇ ಕಿಟ್ ಗಳನ್ನು ಖರೀದಿಸಲಾಗಿದೆ ಎಂಬುದು ಕಾಂಗ್ರೆಸ್ಸಿಗರ ಆರೋಪ.
ಹೀಗಾಗಿ ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ (BS yediyurappa) ಹಾಗೂ ಆರಂಭದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು (Sri ramulu) ಮೇಲೆ ಪ್ರಾಸಿಕ್ಯೂಶನ್ ಅಸ್ತ್ರ (Prosecution) ಪ್ರಯೋಗ ಮಾಡಲು ಕಾಂಗ್ರೆಸ್ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
2020 ರ ಏಪ್ರಿಲ್ ನಿಂದ ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿರುವ ವೇಳೆ ದೊಡ್ಡ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ (Dk shivakumar) ನೇತೃತ್ವದ ಸಂಪುಟ ಉಪಸಮಿತಿ ಸಭೆಯಲ್ಲಿ ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಶಿಪಾರಸ್ಸುಮಾಡುವ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.