• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in ಇದೀಗ, ಕರ್ನಾಟಕ, ರಾಜಕೀಯ
0
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಮೈಸೂರು :  ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ ಭಾವನೆ ಸ್ವಲ್ಪಮಟ್ಟದಲ್ಲಿ ಇದೆ. ಆದರೆ ಅದು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಮಂಡ್ಯದಲ್ಲಿ ಬ್ರಾಹ್ಮಣ ಸಂಘದ ಕಟ್ಟಡಕ್ಕೆ 35 ಲಕ್ಷ ಮತ್ತು ಬೆಳಗಾವಿ ಗಾಯತ್ರಿ ಭವನಕ್ಕೆ 1.5 ಕೋಟಿ ಹಣವನ್ನು ನಾನೇ ಮುಂದೆ ನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕೊಡಿಸಿದ್ದೇನೆ. ಅರ್ಚಕರ ತಸ್ತೀಕ್ ಹಣ ಮೂರು ಬಾರಿ ಹೆಚ್ಚಳ ಮಾಡಿದ್ದು ಸಿದ್ದರಾಮಯ್ಯನವರು. ಬ್ರಾಹ್ಮಣರ ಸಮಸ್ಯೆ ಆಲಿಸಲು ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ನಾನು, ದೇಶಪಾಂಡೆ, ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರಲ್ಲಿ ಕೇಳಿಕೊಂಡಾಗ ಮರು ಮಾತಾಡದೇ ಇದು ಆಗಬೇಕಾದ ಕೆಲಸ ಮಾಡೋಣ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದನ್ನು ಈಗ ಸ್ಮರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮಂಡಳಿಯಿಂದ ಎಷ್ಟು ಜನರಿಗೆ ಅನುಕೂಲ ಆಗುತ್ತಿದೆ ನೋಡಿ. ಪ್ರತಿಭಾ ಪುರಸ್ಕಾರ, ಕಿರು ಸಾಲ ಯೋಜನೆ, ಉನ್ನತ ಶಿಕ್ಷಣಕ್ಕೆ ಸಹಾಯ ಹೀಗೆ ವಿವಿಧ ಕಾರ್ಯಕ್ರಮಕ್ಕೆ ಅನುಕೂಲವಾಗಿದೆ.ಬ್ರಾಹ್ಮಣರು ಅಂದರೆ ಮುಂದುವರಿದ ಜನಾಂಗ ಎಂಬ ಭಾವನೆ ವ್ಯಾಪಕವಾಗಿದೆ. ಆದರೆ ಅವರಲ್ಲೂ ಬಡತನ ಇದೆ, ಹಲವಾರು ತೊಂದರೆಗಳಿವೆ. ಬ್ರಾಹ್ಮಣರ ಸಮಸ್ಯೆಯನ್ನು ಸರ್ಕಾರಕ್ಕೆ ಮುಟ್ಟಿಸಲು ಅಭಿವೃದ್ಧಿ ಮಂಡಳಿ ನೆರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರದಲ್ಲಿಯೂ ರಾಮಲಿಂಗರೆಡ್ಡಿಯವರು ಮುಜರಾಯಿ ಇಲಾಖೆ ಮೂಲಕ ಬ್ರಾಹ್ಮಣರಿರೆ ಹಲವಾರು ಸವಲತ್ತುಗಳನ್ನು ನೀಡಿದ್ದಾರೆ. ನಮ್ಮ ಸರ್ಕಾರದ ಎಲ್ಲ ಯೋಜನೆಗಳು ಎಲ್ಲ ವರ್ಗದ ಬಡವರಿಗೆ ಅನುಕೂಲವಾಗಲಿ ಎಂದು ರೂಪಿಸಿದ್ದೇವೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ಅನುದಾನ ನೀಡುತ್ತಿದ್ದೇವೆ. ಹಿಂದಿನ ಸರ್ಕಾರಗಳು ಎಷ್ಟು ಅನುದಾನ ನೀಡಿದ್ದವು ಎನ್ನುವುದನ್ನೂ ಪರೀಕ್ಷಿಸಿ. ರಾಜಕಾರಣ ಏನೆ ಇರಲಿ ಕಾಂಗ್ರೆಸ್ ಸರ್ಕಾರ ಬ್ರಾಹ್ಮಣರಿಗೆ ಸಹಾಯ ಮಾಡಲ್ಲ ಎನ್ನುವ ಭಾವನೆ ಬಿಡಿ. ಬಡವರ ಪರ, ಎಲ್ಲರನ್ನೂ ಜೋಡಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.

Tags: ##DkShivakumar#CMSiddaramaiahbrahmin communitybrahmin leadersCongress GovernmentDinesh Gundarao
Previous Post

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

Next Post

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

"ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada