ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಬಿಕೆ ಹರಿಪ್ರಸಾದ್ ಹೇಳಿಕೆ ವಿಚಾರ ಕುರಿತು ಗೋವಿಂದ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಕೆ ಹರಿಪ್ರಸಾದ್ ಅವರ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ಹಾಗಾಗಿ ಏನೇನು ಮಾತನಾಡುತ್ತಾರೆ. ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಲೆಕ್ಕಕ್ಕೇ ಇಲ್ಲದ ನಾಯಕ ಎಂದು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಒಬ್ಬ ಹಿರಿಯ ನಾಯಕ. ಆದರೆ ಈಗ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಅಲ್ಲಿ ಅವರಿಗೆ ಮಾನಸಿಕ ಹಿಂಸೆ ಅಗುತ್ತಿದೆ. ಅದನ್ನು ತಡೆಯಲು ಆಗದೆ ಈ ರೀತಿ ಮಾತನಾಡುತ್ತಿದ್ದಾರೆ. ಅದಕ್ಕೆ ಹೆಚ್ಚು ಬೆಲೆ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು. ಅವರು ಮಾತು ಅವರಿಗೆ ಗೌರವ ತರಲ್ಲ. ಅವರು ದೊಡ್ಡವರು ಆಗಲ್ಲ. ಅವರ ವ್ಯಕ್ತಿತ್ವ ಬೆಳೆಯಲ್ಲ. ಬೂಟು ನೆಕ್ಕುವುದು ಎಂಬ ಹೇಳಿಕೆ ಸರಿಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು. ಅವರ ಹೀನ ಸಂಸ್ಕ್ರತಿ ತೋರಿಸುತ್ತದೆ.