ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಗ್ಯಾರಂಟಿ ಕಾರ್ಡ್ ನೀಡಿದ್ದ ಕಾಂಗ್ರೆಸ್ ಇದೀಗ ಇಕ್ಕಟ್ಟಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಗೋಜಿಗೆ ತಲೆ ಹಾಕಲು ಇಚ್ಛಿಸದ ಕಾಂಗ್ರೆಸ್ ನಾಯಕರು ಇದರ ಪರಾಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಕಾರ್ಡ್ ಕುರಿತಂತೆಯೇ ಚರ್ಚೆ ನಡೆದಿದ್ದು ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರುವ ಬಗ್ಗೆ ತೀರ್ಮಾನಿಸಲಾಗಿದೆ.
ಆದರೆ ಈ ಎಲ್ಲಾ ಯೋಜನೆಗಳ ಜಾರಿಯ ಪರಮಾಧಿಕಾರ ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಇರಲಿದೆ.ಒಟ್ಟು ಐದು ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು ಸಂಪುಟ ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.