ಪಾಟ್ನಾ: 2024ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ನಡೆಸಿದರು. ಸಭೆಗೆ ಗೂ ಮೊದಲು ಪಾಟ್ನಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಬಿಹಾರವನ್ನು ಗೆದ್ದರೆ ಇಡೀ ದೇಶವನ್ನು ಗೆಲ್ಲುತ್ತೇವೆ ಎಂದು ಹೇಳಿದರು.


ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು ‘ಭಾರತ್ ಜೋಡೋ’ ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ ‘ಭಾರತ್ ತೋಡೋ’ ಸಿದ್ಧಾಂತವನ್ನು ಹೊಂದಿದೆ ಎಂದು ದೂರಿದರು.

‘ಸದ್ಯ ಭಾರತದಲ್ಲಿ ಸಿದ್ಧಾಂತದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವು ‘ಭಾರತ್ ಜೋಡೋ’ (ಭಾರತವನ್ನು ಒಂದುಗೂಡಿಸುವ) ಸಿದ್ಧಾಂತವನ್ನು ಹೊಂದಿದ್ದರೆ, ಬಿಜೆಪಿ-ಆರ್‌ಆರ್‌ಎಸ್ ‘ಭಾರತ್ ತೋಡೋ’ (ಭಾರತದವನ್ನು ಒಡೆಯುವ) ಸಿದ್ಧಾಂತವನ್ನು ಹೊಂದಿದೆ. ನಾವು ದೇಶದಲ್ಲಿ ಪ್ರೀತಿಯನ್ನು ಹರಡುತ್ತೇವೆ ಮತ್ತು ಮೊಹಬ್ಬತ್ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಬಿಜೆಪಿ-ಆರ್‌ಎಸ್‌ಎಸ್ ದ್ವೇಷ ಮತ್ತು ಸಮಾಜವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕ ಹೇಳಿದರು.