ಬೆಂಗಳೂರು : ಅಕ್ಕಿ ಖರೀದಿ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಹಗ್ಗ ಜಗ್ಗಾಟ ಜೋರಾಗಿದ್ದು, ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಸಿದ್ದು ಸರ್ಕಾರ ಪ್ರತಿಭಟನೆಗೆ ಕರೆ ನೀಡಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಜೂನ್ 20ರಂದು ಪ್ರತಿಭಟನೆ ನಡೆಸಲಿದೆ.

ಜೂನ್ 20ರಂದು ಪ್ರತಿಭಟನೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ನೀಡಿದ್ದಾರೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಪಕ್ಷ ಅಂತಾ ಡಿಕೆ ಶಿವಕುಮಾರ್ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯು ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಮೊದಲು ಅಕ್ಕಿ ಕೊಡುತ್ತೇನೆ ಎಂದು ಹೇಳಿ ಈಗ ಎಫ್ಸಿಐ ಅಕ್ಕಿ ಕೊಡೋಕೆ ಸಾಧ್ಯವಿಲ್ಲ ಅಂತಾ ಹೇಳ್ತಿದೆ. ಇದು ಕೇಂದ್ರ ಸರ್ಕಾರದಿಂದ ನಡೆದ ದ್ವೇಷದ ರಾಜಕಾರಣವಾಗಿದೆ ಎಂದು ಗುಡುಗಿದ್ದಾರೆ.











