2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ(karnataka assembly election results) ನಿನ್ನೆಯಷ್ಟೇ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಬಹುಮತ ಪಡೆದು, ಗೆಲುವಿನ ನಗೆ ಬೀರಿದೆ. ಸುಮಾರು 3 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿ,(BJP) ಈ ಬಾರಿಯ ಚುನಾವಣೆಯಲ್ಲಿ ಸೋಲನ್ನನುಭವಿಸಿದೆ. ಇಂದು ಬೆಂಗಳೂರಿನ(bangalore) ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ,(basavaraj bommai) ʻಕಾಂಗ್ರೆಸ್(congress) ಇಡೀ ದೇಶದಲ್ಲಿ ಸೋತಿದೆ. ಇದು ಮೋದಿಯವರ ಸೋಲಲ್ಲ. ಮೋದಿಯವರು ಕೇವಲ ಇಲ್ಲಿ ಪ್ರಚಾರಕ್ಕೆ ಬಂದಿದ್ದರುʼ ಅಂತ ಹೇಳಿದ್ರು

ಬಳಿಕ ಮಾತನಾಡಿದ ಅವರು, ʻಬಿಜೆಪಿ ಕಚೇರಿಯಲ್ಲಿ(BJP office) ಎಲ್ಲಾ ಪ್ರಮುಖರು ಸೇರಿ, ಬಹಳ ದೀರ್ಘವಾಗಿ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿದ್ದೇವೆ. ಫಲಿತಾಂಶದ ಬಗ್ಗೆ ಬೇರೆ ಬೇರೆ ಕಡೆಯಿಂದ ಇನ್ನಷ್ಟು ಮಾಹಿತಿ ತರಿಸಿಕೊಂಡು ಚರ್ಚೆ ಮಾಡ್ತೇವೆ. ಒಟ್ಟಾರೆ ಫಲಿತಾಂಶದ(results) ಬಗ್ಗೆ ಹಾಗೂ ವಿಧಾನಸಭೆ ಕ್ಷೇತ್ರವಾರು ಪರಾಮರ್ಶೆ ಮಾಡಬೇಕಿದೆʼ ಅಂತ ಬಸವರಾಜ ಬೊಮ್ಮಾಯಿ(basavaraj bommai) ಹೇಳಿದ್ರು. ನಮ್ಮ ಬಿಜೆಪಿ ಅಧ್ಯ ಕ್ಷರು ಇನ್ನು ಮೂರ್ನಾಲ್ಕು ದಿನಗಳೊಳಗೆ ಚುನಾಯಿತ ಪ್ರತಿನಿಧಿಗಳ ಸಭೆ ಕರೆಯುತ್ತಿದ್ದಾರೆ. ಮರುದಿನ ಎಲ್ಲಾ ಅಭ್ಯರ್ಥಿಗಳ ಸಭೆ ಕರೆದು ಚರ್ಚೆ ಮಾಡಲಿದ್ದು, ಅಲ್ಲಿ ಕೂಲಂಕುಷವಾಗಿ ಚರ್ಚೆ ಮಾಡಿ, ಯಾವ ರೀತಿ ಒಗ್ಗಟ್ಟಾಗಿ ಪಕ್ಷ ಬಲವರ್ಧನೆ ಮಾಡ್ಬೇಕು ಅಂತ ಚರ್ಚೆ ಮಾಡ್ತೇವೆ. ನಮಗೆ ಪಕ್ಷ ಸಂಘಟನೆಗೆ ವಿಶ್ರಮ ಇರಲ್ಲ. ನಾವು ಲೋಕಸಭಾ ಚುನಾವಣೆಗೆ(election) ಒಟ್ಟಾಗಿ ಕೆಲಸ ಮಾಡ್ತೇವೆ ಅಂತ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(basavaraj bommai) ತಿಳಿಸಿದ್ರು.

ಬಿಜೆಪಿಯ(BJP) ಸೋಲು ಮೋದಿಯ ಸೋಲು ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ನ(congress) ನಾಯಕತ್ವ ಇಡೀ ದೇಶದಲ್ಲಿ ಸೋತಿದೆ. ಮೋದಿಯವರು ರಾಷ್ಟ್ರೀಯ ನಾಯಕರು. ಇಲ್ಲಿ ಮೋದಿಯವರು ಪ್ರಚಾರಕ್ಕಷ್ಟೇ ಬಂದಿದ್ದರು. ಇದು ಅವರ ಸೋಲು ಅನ್ನುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ನಲ್ಲಿ ಸಿಎಂಗಾಗಿ ಸಿದ್ದು ಡಿಕೆಶಿ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಸವರಾಜ ಬೊಮ್ಮಾಯಿ,(basavaraj bommai) ಸಿದ್ದರಾಮಯ್ಯ,(siddaramaiah) ಡಿ.ಕೆ ಶಿವಕುಮಾರ್(dk shivakumar) ಇಬ್ಬರಿಗೂ ಆಲ್ ದಿ ಬೆಸ್ಟ್ ಎಂದರು. ಈ ವೇಳೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯ(manifesto) ಭರವಸೆಗಳ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಕಾಂಗ್ರೆಸ್ ನವರು ಸರ್ಕಾರ ಮಾಡಲಿ. ಆ ನಂತರ ಕ್ಯಾಬಿನೆಟ್ ಕರೆದು ಏನು ಮಾಡುತ್ತಾರೆ ಎಂದು ನೋಡೋಣ ಅಂತ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಹೇಳಿದ್ರು.
