• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, July 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್‌ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿಷಪ್ರಾಶನ ಮಾಡಿದೆ: ಮಾಜಿ ಸಿಎಂ ಹೆಚ್‌.ಡಿ.ಕೆ

Any Mind by Any Mind
September 20, 2023
in ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಹಾಗೂ ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದರು. ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ರಾಜ್ಯ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಖಡಕ್ ತನಿಖೆ ನಡೆಸಿ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು. ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ. ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿ ಶೀಘ್ರವೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಷಡ್ಯಂತ್ರ, ಕುತಂತ್ರ, ಕುಯುಕ್ತಿಗಳನ್ನು ಪ್ರಯೋಗ ಮಾಡಲು ಹೊರಟಿದೆ. ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿಷಪ್ರಾಶನ ಮಾಡುವ ಈ ದೇಶದ್ರೋಹಿ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಕಾಂಗ್ರೆಸ್ ಕಪಿಮುಷ್ಟಿಯಿಂದ ಪ್ರಜಾಪ್ರಭುತ್ವ ಹಾಗೂ ಭಾರತವನ್ನು ಉಳಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದ್ದಾರೆ.

Previous Post

ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಯಾಗಿದ್ದ ಶಿವಣ್ಣ ವಿರುದ್ಧ FIR..!

Next Post

ಭಾಗ-೧: ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Related Posts

Top Story

ಚಿತ್ರ ವಿಮರ್ಶೆ: ಸಿಂಪಲ್‌ ರಕ್ಕಿಯ ರೌಡಿಸಂ ಕಥೆಗೆ ಹುಡುಗಿಯೇ ಟ್ವಿಸ್ಟು!

by ಪ್ರತಿಧ್ವನಿ
July 11, 2026
0

ಚಿತ್ರ ರಕ್ಕಿ: ನಿರ್ದೇಶನ: ವೆಂಕಟ್‌ ಭಾರಧ್ವಾಜ್‌ ನಿರ್ಮಾಣ: ಸುರೇಶ್‌ ಸಾಲಿಗ್ರಾಮ ತಾರಾಗಣ: ರಕ್ಕಿ ಸುರೇಶ್, ಪಲ್ಲವಿ ಮಂಜುನಾಥ್, ಆಶಿಕಾ ಸೋಮಶೇಖರ್, ಬಿ.ಸುರೇಶ, ಹರಿಣಿ, ಸಂಪತ್‌ ಕುಮಾರ್‌, ಗೋವಿಂದೇಗೌಡ,...

Read moreDetails
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

July 10, 2026
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

July 10, 2026
Prakash Raj: 4 ವೋಟರ್ ಐಡಿ ಆರೋಪ-ನಟ ಪ್ರಕಾಶ್ ರಾಜ್‌ಗೆ ಜಾಮೀನು

Prakash Raj: 4 ವೋಟರ್ ಐಡಿ ಆರೋಪ-ನಟ ಪ್ರಕಾಶ್ ರಾಜ್‌ಗೆ ಜಾಮೀನು

July 10, 2026
ದರ್ಶನ್‌ ಫ್ಯಾನ್ಸ್‌ ಎಂದಿಗೂ ತಪ್ಪು ಮಾಡಲ್ಲ! ರೈತ ಹೀರೋನಾ ಅಂದ್ರು ಕೆಲ ನಾಯಕಿಯರು!

ದರ್ಶನ್‌ ಫ್ಯಾನ್ಸ್‌ ಎಂದಿಗೂ ತಪ್ಪು ಮಾಡಲ್ಲ! ರೈತ ಹೀರೋನಾ ಅಂದ್ರು ಕೆಲ ನಾಯಕಿಯರು!

July 10, 2026
Next Post
ಭಾಗ-೧: ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಭಾಗ-೧: ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada