
ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಿರುವ ಸಚಿವ ಕೆ.ಎನ್.ರಾಜಣ್ಣ (KN Rajanna) ಹನಿಟ್ರ್ಯಾಪ್ (Honey trap) ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ (Cm siddaramaiah) ಅವರಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ (KC Venugopal) ಮಾಹಿತಿ ಪಡೆದಿದ್ದಾರೆ ಎಂಬ ಎನ್ನಲಾಗಿದೆ.

ಕಾಂಗ್ರೆಸ್ ನಾಯಕರು ಆರೋಪಿಸಿದ ಹನಿಟ್ರ್ಯಾಪ್ ಆರೋಪದ ಬಗ್ಗೆ ಕಾಂಗ್ರೆಸ್ ಹೈಕಮ್ಯಾಂಡ್ (congress highcommand) ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.ವಿಧಾನಸಭೆ ಸದನದಲ್ಲಿ ನಡೆದ ಘಟನೆಯ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಹನಿಟ್ರ್ಯಾಪ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಸಚಿವ ರಾಜಣ್ಣ ಪುತ್ರ ರಾಜೇಂದ್ರಗೆ ಬರುವಂತೆ ಸಿಎಂ ಹೇಳಿದ್ದರು.ಹೀಗಾಗಿ ದಾಖಲೆಗಳ ಸಮೇತ ಸಿಎಂಗೆ ರಾಜೇಂದ್ರ ವಿವರಣೆ ನೀಡಿದ್ದಾರೆ.