• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೆಹಲಿ | ರಾಜ್ಯ ಕಾಂಗ್ರೆಸ್‌ ನಾಯಕರ ಜತೆ ವರಿಷ್ಠರ ಸಭೆ ; 20 ಲೋಕಸಭಾ ಕ್ಷೇತ್ರಗಳ ಗೆಲ್ಲಲು ತಂತ್ರ

ಪ್ರತಿಧ್ವನಿ by ಪ್ರತಿಧ್ವನಿ
August 3, 2023
in ಇದೀಗ, ದೇಶ, ರಾಜಕೀಯ
0
ರಾಜ್ಯ ಕಾಂಗ್ರೆಸ್‌
Share on WhatsAppShare on FacebookShare on Telegram

ದೆಹಲಿ ರಾಜ್ಯಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ ನಾಯಕರು ಮಂಗಳವಾರ (ಆಗಸ್ಟ್‌ 1) ತೆರಳಿದ್ದು ವರಿಷ್ಠರ ಜತೆಗಿನ ಸಭೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಈ ವೇಳೆ ಹಲವು ಮಹತ್ವದ ವಿಷಯಗಳು ಚರ್ಚೆಯಾಗಿವೆ ಎಂದು ಮೂಲಗಳು ಹೇಳಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಭೆ ಮುಂಬರುವ ಲೋಕಸಭೆ ಚುನಾವಣೆಯ ಎದುರಿಸಲು ಕಾರ್ಯತಂತ್ರ ರೂಪಿಸಲು ಸಂಬಂಧಿಸಿತ್ತು ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದುತ್ವ ವಿಚಾರವನ್ನು ಮುನ್ನಲೆಗೆ ಇಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾಗಿರುವ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ಹೈಕಮಾಂಡ್‌ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಸಣ್ಣ ಸಣ್ಣ ಸಮುದಾಯಗಳನ್ನು ಗುರಿಯಾಗಿಸಿ, ಅವರಲ್ಲಿ ಕಾಂಗ್ರೆಸ್ ಬಗ್ಗೆ ಭರವಸೆ ಮೂಡುವಂತೆ ತಂತ್ರಗಾರಿಕೆ ರೂಪಿಸಲು ಚರ್ಚೆ ನಡೆಲಾಗಿದೆ.

ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್ನ 37 ನಾಯಕರೊಂದಿಗೆ ನಡೆದ ಲೋಕಸಭೆ ಚುನಾವಣೆ ಕುರಿತ ಚಿಂತನಾ ಸಭೆಯಲ್ಲಿ ಈ ಚರ್ಚೆಯಾಗಿದೆ. ಬಿಜೆಪಿಯ ಹಿಂದುತ್ವದ ಅಜೆಂಡಾ ಚುನಾವಣೆ ಗೆಲ್ಲಲು ಮಾತ್ರ. ಸಣ್ಣ ಸಮುದಾಯಗಳು ಈಗಲೂ ಸಂಕಷ್ಟದಲ್ಲಿದ್ದು, ಈ ಸಮುದಾಯಗಳ ಯುವಕರ ಭವಿಷ್ಯ ಹಾಗೂ ಕಾಂಗ್ರೆಸ್ ಜತೆ ಗುರುತಿಸಿಕೊಳ್ಳಲು ಕಾರ್ಯಕ್ರಮ ರೂಪಿಸಬೇಕು ಎಂದು ಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಸಲಹೆ ನೀಡಿದ್ದಾರೆ.

ಲಕ್ಷ್ಮಣ ಸವದಿ ಅವರ ಈ ಅಭಿಪ್ರಾಯಕ್ಕೆ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಬೆಂಬಲ ವ್ಯಕ್ತಪಡಿಸಿದರು. ಹೀಗಾಗಿ ನಿರ್ಲಕ್ಷಿತ, ಶೋಷಿತ ಸಮುದಾಯಗಳತ್ತ ದೃಷ್ಟಿ ನೆಡಲು ಉದ್ದೇಶಿಸಲಾಗಿದೆ. ಬಿಜೆಪಿಯ ಕೋಮುವಾದಕ್ಕೆ ಸಣ್ಣ ಜಾತಿಗಳ ಅಭಿವೃದ್ಧಿಯ ಪ್ರತಿವಾದ ನಮ್ಮದಾಗಿರಬೇಕು ಎನ್ನುವ ಒಮ್ಮತಾಭಿಪ್ರಾಯ ವ್ಯಕ್ತವಾಗಿದೆ.

ರಾಜ್ಯ ಕಾಂಗ್ರೆಸ್‌ ಕರ್ನಾಟಕದಲ್ಲಿ ಅಭೂತಪೂರ್ವ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ 15-20 ಸೀಟುಗಳನ್ನು ಗೆಲ್ಲಲೇಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಸಮ್ಮತಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮಾತನಾಡಿ, ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕ ಅಂಟಿಕೊಳ್ಳದಂತೆ ಎಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರ ಎಂದು ಜನರಲ್ಲಿ ಅಭಿಪ್ರಾಯ ಬರುವಂತೆ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಾಯಕರು ಕೇಂದ್ರ ಸರ್ಕಾರದ ವೈಫಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು ಎಂದು ರಾಹುಲ್‌ ಗಾಂಧಿ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ಸಭೆಯಲ್ಲಿ ರಾಹುಲ್‌ ಅವರು ರಾಜ್ಯದ ಕಾಂಗ್ರೆಸ್‌ ನಾಯಕರ ಅಸಮಾಧಾನ ಶಮನದ ಕುರಿತೂ ಮಾತನಾಡಿದ್ದಾರೆ. ಆಂತರಿಕ ಸಮಸ್ಯೆಗಳನ್ನು ಬಹಿರಂಗಪಡಿಸಬೇಡಿ. ಎಲ್ಲವನ್ನೂ ಮಾತನಾಡಿ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ಪ್ರಸಿದ್ಧ ಕಲಾ ನಿರ್ದೇಶಕ ನಿತಿನ್‌ ದೇಸಾಯಿ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮತ ಗಳಿಕೆಯನ್ನು ಹೆಚ್ಚಿಸಿದ್ದಾರೆ. ರಾಜ್ಯದಲ್ಲಿ ಶೇ.43 ರಷ್ಟು ಕಾಂಗ್ರೆಸ್‌ ಮತಗಳಿಕೆಯಾಗಿದೆ. ಇದನ್ನು ಲೋಕಸಭೆ ಚುನಾವಣೆಗೂ ಮುಂದುವರಿಸಿಕೊಂಡು ಹೋಗಬೇಕು ಎಂದು ಹಿರಿಯ ನಾಯಕರು ರಾಜ್ಯ ನಾಯಕರು ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರತಿ ಜಿಲ್ಲೆಯಲ್ಲೂ ಫಲಾನುಭವಿಗಳ ಸಮಾವೇಶ ನಡೆಸಬೇಕು. ಆ ಮೂಲಕ ಫಲಾನುಭವಿಗಳಲ್ಲಿ ಸರ್ಕಾರದ ಬಗ್ಗೆ ತೃಪ್ತಿಕರ ಭಾವನೆ ಗಟ್ಟಿಗೊಳಿಸಬೇಕು. ಗ್ಯಾರೆಂಟಿ ಯೋಜನೆ ಯಾರೂ ವಿರೋಧಿಸುತ್ತಿಲ್ಲ. ಅದರಿಂದ ಸಮನ್ವಯ ಸಾಧಿಸಲು ಸಮಾವೇಶ ಅಗತ್ಯವಾಗಿದೆ ಎಂದು ಸಭೆಯಲ್ಲಿ ರ್ಚಚಿಸಲಾಗಿದೆ ಎಂದು ಹೇಳಲಾಗಿದೆ.

Tags: CM SiddaramaiahCongress High CommandDelhiMallikarjun KhargeRahul GandhiState Congressಕಾಂಗ್ರೆಸ್‌ಕಾಂಗ್ರೆಸ್‌ ಹೈ ಕಮಾಂಡ್‌ದೆಹಲಿಮಲ್ಲಿಕಾರ್ಜುನ ಖರ್ಗೆರಾಜ್ಯ ಕಾಂಗ್ರೆಸ್‌
Previous Post

ಅಂಕಣ | ಇತಿಹಾಸವನ್ನು ಅಳಿಸಲು ಸಾಧ್ಯವಿಲ್ಲ

Next Post

ವಾರಾಣಸಿ | ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಸಮ್ಮತಿ

Related Posts

Parents sell their one-month-old infant to buy gold jewelry and a smartphone
Top Story

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

by ಪ್ರತಿಧ್ವನಿ
September 29, 2026
0

ಛತ್ರಪತಿ ಸಂಭಾಜಿನಗರ:  ದುಬಾರಿ ಸ್ಮಾರ್ಟ್‌ಫೋನ್ (Smartphone) ಮತ್ತು ಬಂಗಾರದ ಒಡವೆಗಳನ್ನು ಖರೀದಿಸುವ ದುರಾಸೆಗೆ ಬಿದ್ದು ಹೆತ್ತ ತಂದೆ-ತಾಯಿಯೇ ತಮ್ಮ ಕೇವಲ ಒಂದು ತಿಂಗಳ ಹಸುಗೂಸನ್ನು ಮಾರಾಟ ಮಾಡಿರುವ...

Read moreDetails
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
Tomorrow is the last day for biometric Aadhaar authentication to avail the LPG subsidy

ಗ್ರಾಹಕರೇ ಗಮನಿಸಿ : ಎಲ್ ಪಿಜಿ ಸಬ್ಸಿಡಿ ಪಡೆಯಲು `ಬಯೋಮೆಟ್ರಿಕ್ ಆಧಾರ್ ದೃಢೀಕರಣ’ಕ್ಕೆ ನಾಳೆಯೇ ಲಾಸ್ಟ್ ಡೇಟ್ | LPG

September 29, 2026
10 Major Changes from October 1 Impact on Your Pocket Too

ಅಕ್ಟೋಬರ್ 1ರಿಂದ 10 ಪ್ರಮುಖ ಬದಲಾವಣೆಗಳು: ನಿಮ್ಮ ಜೇಬಿನ ಮೇಲೂ ಪರಿಣಾಮ | Rules Change

September 29, 2026
Next Post
ಜ್ಞಾನವಾಪಿ ಮಸೀದಿ

ವಾರಾಣಸಿ | ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಸಮ್ಮತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada