ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ (Congress government) ಕೇವಲ ಪೇಪರ್ ಟೈಗರ್ (Paper tiger) ರೀತಿ ಆಗಿದೆ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂಮರಿಗೆ ಶೇ4ರಷ್ಟು ಮೀಸಲು (4% Muslim reservation) ನೀಡಲು ಕಾಂಗ್ರೆಸ್ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಸರ್ಕಾರದ ತೀರ್ಮಾನ ಅಸಂವಿಧಾನಿಕ. ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವ ಕುರಿತು ಸಂವಿಧಾನದಲ್ಲಿ ಎಲ್ಲಿಯೂ ಉಲ್ಲೇಖ ಆಗಿಲ್ಲ ಎಂದಿದ್ದಾರೆ.

ಹೀಗಾಗಿ ಕಾಂಗ್ರೆಸ್ ಸರ್ಕಾರದ ಈ ನಡೆ ಧರ್ಮ ಧರ್ಮಗಳ ಮಧ್ಯೆ ಕಂದಕ ನಿರ್ಮಾಣವಾಗುವಂತೆ ಮಾಡುವ ಷಡ್ಯಂತ್ರದ ಭಾಗವಾಗಿದೆ.ಈ ಮುಸ್ಲಿಂ ಓಲೈಕೆ ರಾಜಕಾರಣ ಎಷ್ಟು ಅತಿರೇಕಕ್ಕೆ ಹೋಗಿದೆ ಎಂಬುದು ಇದರಿಂದ ಗೊತ್ತಾಗುತ್ತೆ. ಈ ಬಗ್ಗೆ ನಾವು ಸದನದ ಒಳಗೂ ಹೊರಗೂ ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದಿದ್ದಾರೆ.