• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೇಕೆದಾಟು ಜಾರಿಗೆ ಆಗ್ರಹ : ಕಾಂಗ್ರೆಸ್, ಜೆಡಿಎಸ್ ನಡುವೆ ಶುರುವಾಯ್ತು ಪಾದಯಾತ್ರೆ ಪಾಲಿಟಿಕ್ಸ್!

Any Mind by Any Mind
November 14, 2021
in ಕರ್ನಾಟಕ, ರಾಜಕೀಯ
0
ಮೇಕೆದಾಟು ಜಾರಿಗೆ ಆಗ್ರಹ : ಕಾಂಗ್ರೆಸ್, ಜೆಡಿಎಸ್ ನಡುವೆ ಶುರುವಾಯ್ತು ಪಾದಯಾತ್ರೆ ಪಾಲಿಟಿಕ್ಸ್!
Share on WhatsAppShare on FacebookShare on Telegram

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ದಶಕಗಳಿಂದ ವಿವಾದದ ಹೊಗೆಯಾಡುತ್ತಲೇ ಇದೆ. ನೀ ಕೊಡೆ ನಾ ಬಿಡೆ ಅಂತಾ ರಗಳೆಗಳು ಮುಂದುವರಿದಿವೆ. ಇದೀಗ ಇದೇ ಮೇಕೆದಾಟು ವಿಚಾರ ರಾಜ್ಯ ರಾಜಕೀಯದ ದಾಳವಾಗಿ ಮಾರ್ಪಟ್ಟಿದೆ. ಅಲ್ಲದೇ ಕಾಂಗ್ರೆಸ್-ಜೆಡಿಎಸ್ ನಾಯಕರ ಮಧ್ಯೆ ಮಾತಿನ ಸಮರಕ್ಕೂ ಕಾರಣವಾಗಿದೆ.

ADVERTISEMENT

ಮಿನಿ ಸಮರದಲ್ಲಿ ಹಾನಗಲ್ ಕ್ಷೇತ್ರವನ್ನ ಜಯಿಸಿರೋ ಕಾಂಗ್ರೆಸ್ ಸದ್ಯ ಭಾರೀ ಹುಮ್ಮಸ್ಸಿನಲ್ಲಿದೆ. ಈ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಪುಟಿದೇಳಲು ನಾನಾ ತಂತ್ರಗಳನ್ನ ಹೆಣೆಯುತ್ತಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಮೇಕೆದಾಟು ಯೋಜನೆಯನ್ನ ಜಾರಿಗೆ ತರುವಂತೆ ಕೈ ಕಲಿಗಳು ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ.

ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಸುಮಾರು 100 ಕಿಲೋ ಮೀಟರ್ ಪಾದಯಾತ್ರೆ ಮಾಡಲು ಕಾಂಗ್ರೆಸ್ ಸಿದ್ಧವಾಗಿದೆ. ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ನಡೆಸುತ್ತಿರುವುದಾಗಿ ನಿನ್ನೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇನ್ನು ಡಿಸೆಂಬರ್ ಮೊದಲ ವಾರದಲ್ಲಿ ಪಾದಯಾತ್ರೆ ನಡೆಸಲು ಹಸ್ತ ನಾಯಕರು ಚಿತ್ತಹರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಈ ಮೂಲಕ ಕಾಂಗ್ರೆಸ್ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಯನ್ನ ಹೊಡೆಯಲು ಮುಂದಾಗಿದೆ.

ಒಂದೇ ಕಲ್ಲಿಗೆ ಮೂರು ಹಕ್ಕಿ

  1. ರಾಜ್ಯ ಸರ್ಕಾರದ ವಿಳಂಬ ಧೋರಣೆಯನ್ನ ಪ್ರಶ್ನಿಸುವುದು
  2. ಕೇಂದ್ರ ಸರ್ಕಾರದ ಅನುಮತಿ ನಿರಾಕರಣೆ ಪ್ರಶ್ನಿಸುವುದು
  3. ತಮಿಳುನಾಡು ವಿರುದ್ಧ ಕಿಡಿಕಾರಿ ಕನ್ನಡಿಗರ ಮನಗೆಲ್ಲುವುದು

ಮೇಕೆದಾಟು ಯೋಜನೆಯನ್ನ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರದ ವಿಳಂಬ ಧೋರಣೆಯನ್ನ ಕಾಂಗ್ರೆಸ್ ಪ್ರಶ್ನಿಸಲಿದೆ. ಜೊತೆಗೆ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನ ನಿರಾಕರಿಸುವುದನ್ನೂ ಕಾಂಗ್ರೆಸ್ ಎತ್ತಿತೋರಿಸಲಿದೆ. ಅಲ್ಲದೇ ತಮಿಳುನಾಡಿನ ವಿರುದ್ಧ ಕಿಡಿಕಾರುವ ಮೂಲಕ ಕನ್ನಡಿಗರ ಮನಗೆಲ್ಲುವುದು ಹೀಗೆ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನ ಹೊಡೆಯುವುದು ಕೈ ನಾಯಕರ ಮಾಸ್ಟರ್ ಪ್ಲಾನ್ ಆಗಿದೆ.
ಇದಷ್ಟೇ ಅಲ್ಲ ಮೈಸೂರು ಮತ್ತು ಬೆಂಗಳೂರು ಜನರ ಮನಗೆಲ್ಲಲು ಕಾಂಗ್ರೆಸ್ ಇಷ್ಟೆಲ್ಲಾ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ. ಈ ಮೂಲಕ 2023ರ ಚುನಾವಣೆಯನ್ನ ಗೆಲ್ಲಲು ಈಗಿನಿಂದಲೇ ಶಸ್ತ್ರಾಭ್ಯಾಸದಲ್ಲಿ ತೊಡಗಿದೆ.

ಪಾದಯಾತ್ರೆ ಪಾಲಿಟಿಕ್ಸ್?

ತಂತ್ರ 1: ಹಳೇ ಮೈಸೂರು ಭಾಗದಲ್ಲಿ ನೆಲೆಯೂರಲು ಯತ್ನಿಸ್ತ್ತಿರುವ ಬಿಜೆಪಿಗೆ ರಾಜಕೀಯ ಪೆಟ್ಟು

ತಂತ್ರ 2: ಡಬ್ಬಲ್ ಇಂಜಿನ್ ಸರ್ಕಾರ ಎಂಬುದು ಕೇವಲ ಘೋಷಣೆಗೆ ಸೀಮಿತವೆಂಬ ಸಂದೇಶ

ತಂತ್ರ 3: ತಮಿಳುನಾಡು ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡ್ತಿದೆ ಎಂದು ಕಿಡಿ

ತಂತ್ರ 5: ಕನ್ನಡಿಗರು ಅದರಲ್ಲೂ ಬೆಂಗಳೂರಿಗರ ಮನ ಗೆಲ್ಲೋದಕ್ಕೆ ರಾಜಕೀಯ ತಂತ್ರಗಾರಿಕೆ

ಪಾದಯಾತ್ರೆ ಮೂಲಕ ಹಳೇ ಮೈಸೂರು ಭಾಗದಲ್ಲಿ ನೆಲೆಯೂರಲು ಯತ್ನಿಸ್ತ್ತಿರುವ ಬಿಜೆಪಿಗೆ ರಾಜಕೀಯವಾಗಿ ಪೆಟ್ಟು ಕೊಡೋದು ಕಾಂಗ್ರೆಸ್ನ ಮೊದಲ ತಂತ್ರವಾಗಿದೆ. ಅಲ್ಲದೇ ಡಬ್ಬಲ್ ಇಂಜಿನ್ ಸರ್ಕಾರ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವೆಂಬ ಸಂದೇಶವನ್ನ ರವಾನಿಸಲು ಕೈ ನಾಯಕರು ಪ್ಲಾನ್ ಆಗಿದೆ. ಮತ್ತೊಂದೆಡೆ ತಮಿಳುನಾಡು ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡ್ತಿದೆ ಎಂದು ಕಿಡಿ ಹಾರಿಸುವ ಮೂಲಕ ಕನ್ನಡಿಗರು ಅದರಲ್ಲೂ ಬೆಂಗಳೂರಿಗರ ಮನ ಗೆಲ್ಲೋದಕ್ಕೆ ಹಸ್ತನಾಯಕರ ರಾಜಕೀಯ ತಂತ್ರಗಾರಿಕೆಯಾಗಿದೆ ಎನ್ನಲಾಗಿದೆ.

ಇನ್ನು ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಲು ಈ ಮೊದಲೇ ಜೆಡಿಎಸ್ ಪ್ರಸ್ತಾಪ ಮಾಡಿತ್ತಂತೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ವಿಚಾರ ತಿಳೀತಿದ್ದಂತೆ ದಳಪತಿಗಳು ನಿಗಿನಿಗಿ ಕೆಂಡವಾಗಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಒಟ್ಟಾರೆ, ಮೇಕೆದಾಟು ಯೋಜನೆ ಶೀಘ್ರವೇ ಜಾರಿಯಾಗ್ಲಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬವಣೆ ನೀಗಲಿ ಅನ್ನೋದು ಒಳ್ಳೆಯ ಉದ್ದೇಶ. ಆದ್ರೆ, ಇದೇ ವಿಚಾರವನ್ನ ಇಟ್ಕೊಂಡು ರಾಜಕೀಯ ಮಾಡೋದು ಎಷ್ಟರ ಮಟ್ಟಿಗೆ ಸರಿ ಅನ್ನೋದು ಜನರ ಪ್ರಶ್ನೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಪಾದಯಾತ್ರೆಪಾಲಿಟಿಕ್ಸ್ಬಿ ಎಸ್ ಯಡಿಯೂರಪ್ಪಬಿಜೆಪಿಮೇಕೆದಾಟುಸಿದ್ದರಾಮಯ್ಯ
Previous Post

ಪ್ರಿಯಾಂಕಾ ಖರ್ಗೆ ಹೆಸರು ಗಂಡೊ – ‌ಹೆಣ್ಣೋ ಗೊತ್ತಿಲ್ಲ – ಸಂಸದ ಪ್ರತಾಪ್ ಸಿಂಹ / Pratap Shima

Next Post

ಮನಸೂರೆಗೊಂಡ ತೆಂಗಿನಕಾಯಿ ಸುಲಿಯುವ ಯಂತ್ರ!

Related Posts

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ
ರಾಜಕೀಯ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

by ಪ್ರತಿಧ್ವನಿ
April 18, 2026
0

ಏಪ್ರಿಲ್ 18ರಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದೇ ಇರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲೂ...

Read moreDetails
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಮನಸೂರೆಗೊಂಡ ತೆಂಗಿನಕಾಯಿ ಸುಲಿಯುವ ಯಂತ್ರ!

ಮನಸೂರೆಗೊಂಡ ತೆಂಗಿನಕಾಯಿ ಸುಲಿಯುವ ಯಂತ್ರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada