ಹುಬ್ಬಳ್ಳಿ : ಮುಸಲ್ಮಾನರನ್ನು ತೃಪ್ತಿ ಪಡಿಸುವುದೇ ಕಾಂಗ್ರೆಸ್ ಕೆಲಸ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ ರಕ್ಷಿಸುತ್ತಿರುವ ಬಜರಂಗದಳವನ್ನು ಕಾಂಗ್ರೆಸ್ ಪಿಎಫ್ಐಗೆ ಹೋಲಿಸಿದ್ದು ದುರಂತ ಎಂದಿದ್ದಾರೆ.

ಅಲ್ಲದೇ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ ಶೆಟ್ಟರ್ ಬಗ್ಗೆಯು ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿ ಆರ್ಎಸ್ಎಸ್, ಹಿಂದುತ್ವದ ಬಗ್ಗೆ ಮಾತನಾಡಿದವರು. ಈ ಸಂದರ್ಭದಲ್ಲಿ ಬಹಿರಂಗವಾಗಿ ಕಾಂಗ್ರೆಸ್ ನಿಲುವನ್ನು ಖಂಡಿಸುವ ಮೂಲಕ ತಮ್ಮ ಸ್ವಾಭಿಮಾನ ಪ್ರದರ್ಶಿಸುತ್ತಾರೆಂದು ನಾನು ನಿರೀಕ್ಷಿಸಿದ್ದೆ. ಒಂದು ವೇಳೆ ಬಜರಂಗಳ ನಿಷೇಧ ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾದಲ್ಲಿ ಶೆಟ್ಟರ್ ಏನು ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.
ಶೆಟ್ಟರ್ ಇಂದಿಗೂ ತಮ್ಮ ಕಚೇರಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಫೋಟೋ ಇಟ್ಟುಕೊಂಡಿದ್ದಾರೆ. ಇದು ಅವರ ಸಿದ್ಧಾಂತವನ್ನು ಬಿಟ್ಟುಕೊಟ್ಟಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.