ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದ ನಾಯಕಿ ಭವ್ಯ ನರಸಿಂಹಮೂರ್ತಿ ವಿಶಿಷ್ಟ ಸಕಾರಾತ್ಮಕ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಭಾರತೀಯ ಸೇನೆಯ ವಿಶಿಷ್ಟ ಸೇವೆಗೆ ನಿಯೋಜನೆಗೊಂಡಿದ್ದಾರೆ. ಸ್ವತಃ ಸೋಷಿಯಲ್ ಮಿಡಿಯಾದಲ್ಲಿ ಸಂತಸದ ವಿಚಾರ ಹಂಚಿಕೊಂಡಿದ್ದಾರೆ.
ಭವ್ಯ ಪೋಸ್ಟ್ ನಲ್ಲಿ ಏನಿದೆ ?
ನನ� ಜೀವನದ ಅತ್ಯಂತ ಹೆಮ್ಮೆಯ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ಈಗ �ನಾನು Territorial army (�ಪ್ರಾದೇಶಿಕ ಸೇನೆಯಲ್ಲಿ)� ಕಮಿಷನಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆ ಗೊಂಡಿದ್ದೇನೆ.
ನಾನು ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ, ಹಾಗು 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೀನೆ.
ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟನಂಟ್ (Lieutenant) ಆಗಿ ನಿಯೋಜನೆಗೊಂಡಿದ್ದೇನೆ.
ಪ್ರಾದೇಶಿಕ ಸೇನೆಯು ಭಾರತೀಯ ನಾಗರಕರಿಗೆ ತಮ್ಮ ನಾಗರಿಕ ವೃತ್ತಿಯ ಜೊತೆಗೆ ಭಾರತೀಯ ಸೇನೆಯ ಭಾಗವಾಗಿ ದೇಶಸೇವೆ ಮಾಡುವ ಅವಕಾಶವಾಗಿದೆ.
ಪ್ರಸ್ತುತ Territorial Army ಯಲ್ಲಿರುವ ಕೆಲವು ಪ್ರಮುಖ ವ್ಯಕ್ತಿಗಳಲ್ಲಿ ಕ್ರಿಕೆಟ್ ಆಟಗಾರರಾದ ಶ್ರೀ ಎಂ ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಮಂತ್ರಿಗಳಾದ ಶ್ರೀ ಸಚಿನ್ ಪಿಲಾಟ್, ಮಾಜಿ ಕೇಂದ್ರ ಸಚಿವರಾದ ಶ್ರೀ ಅನುರಾಗ ಥಾಕುರ್ ಮತ್ತು ಇತರರು ಸೇರಿದ್ದಾರೆ.
ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆಸ್ ಸಲ್ಲಿಸುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ದಳಿದ್ದೇನೆ.
ನಿಮ್ಮೆಲ್ಲರ ಪ್ರೀತಿ ಅಭಿಮಾನ ಹಾಗು ಆಶೀರ್ವಾದ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಕೇಳುತ್ತ
ಜೈ ಹಿಂದ್
ಜೈ ಕರ್ನಾಟಕ
Lt ಭವ್ಯ ನರಸಿಂಹಮೂರ್ತಿ