ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕೌಂಟ್ಡೌನ್ ನಡೆಯುತ್ತಿದೆ. ಈ ಬಾರಿ ಕಾಂಗ್ರೆಸ್ 112 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಸರ್ಕಾರ ರಚನೆಯ ಕನಸು ಚಿಗುರೊಡೆದಿದೆ.

ಸರ್ವಜ್ಞನಗರದಲ್ಲಿ ಮುನ್ನಡೆ ಸಾಧಿಸಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಜೆ ಜಾರ್ಜ್ ತಮ್ಮ ಸಂತಸವನ್ನು ಹೊರ ಹಾಕಿದ್ದಾರೆ.
ಮತದಾರರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಧನ್ಯವಾಧಗಳು ಎಂದು ಮಾಜಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.