ಜ್ವರ ಕಾಣಿಸಿಕೊಂಡ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಪ್ತ ವೈದ್ಯ ಡಾ.ರವಿ ಕುಮಾರ್ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿದ್ದು, ವೈರಲ್ ಫೀವರ್ ಆದ ಕಾರಣ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಎರಡನೇ ಬಾರಿ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ.

ಇಂದು ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ತೆರಳಿ ಪೂರ್ಣ ಪ್ರಮಾಣದ ತಪಾಸಣೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.