• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ ಸಂಕಷ್ಟ: ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದು ಸಲಹೆ ನೀಡಿದ ಸಿದ್ಧರಾಮಯ್ಯ

Any Mind by Any Mind
April 28, 2021
in ಕರ್ನಾಟಕ
0
ಕೋವಿಡ್‌ ಸಂಕಷ್ಟ: ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದು ಸಲಹೆ ನೀಡಿದ ಸಿದ್ಧರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರೋನಾ  ಸೋಂಕು ನಿಯಂತ್ರಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಸಾರ್ವಜನಿಕರ ರಕ್ಷಣೆಗೆ ಸರ್ಕಾರ ಯಾವ ರೀತಿ ಮುಂದಾಗಬೇಕು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.  

ಪತ್ರದಲ್ಲಿ ಉಲ್ಲೇಖಿಸಲಾದ ಅಂಶಗಳು

ರಾಜ್ಯದಲ್ಲಿ ಈಗ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳನ್ನು ಕನಿಷ್ಟ 50 ಪಟ್ಟು ಹೆಚ್ಚಿಸಬೇಕು. ಅವಶ್ಯವಿದ್ದರೆ ಶಾಲೆ, ಕಾಲೇಜುಗಳ ಹಾಸ್ಟೆಲ್, ಹೋಟೆಲ್, ಕಲ್ಯಾಣ ಮಂಟಪ, ಸಮುದಾಯ ಭವನ ಮುಂತಾದ ಕಡೆ ತಾತ್ಕಾಲಿಕವಾಗಿ ಬೆಡ್ಗಳ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸೋಂಕಿತರನ್ನು ನೋಡಿಕೊಳ್ಳಲು ನುರಿತ ತಜ್ಞರ ತಂಡದ ಜೊತೆಗೆ ವೈದ್ಯಕೀಯ ವ್ಯಾಸಂಗದ ಅಂತಿಮ ವರ್ಷಗಳಲ್ಲಿರುವ ವೈದ್ಯಕೀಯ, ಅರೆವೈದ್ಯಕೀಯ ವಿದ್ಯಾರ್ಥಿಗಳನ್ನು, ದಾದಿಯರನ್ನು ನೇಮಿಸಬೇಕು. ಜೊತೆಗೆ ಸ್ವ-ಇಚ್ಛೆಯಿಂದ ಮುಂದೆ ಬರುವ ರಾಜಕೀಯೇತರ ಸ್ವಯಂ ಸೇವಕರಿಗೆ ಕ್ಷಿಪ್ರ ತರಬೇತಿಗಳನ್ನು ನೀಡಿ, ತಜ್ಞ ವೈದ್ಯರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಇದರ ಜೊತೆಗೆ ನಿವೃತ್ತ ವೈದ್ಯರು, ದಾದಿಯರನ್ನೂ ಸಹ ತಾತ್ಕಾಲಿಕವಾಗಿ ಮರುನೇಮಕ ಮಾಡಿಕೊಳ್ಳಬೇಕು. ಈ ಎಲ್ಲಾ ವೈದ್ಯ ಸಿಬ್ಬಂದಿಗಳಿಗೆ ಆಕರ್ಷಕವಾದ ಸಂಬಳ, ಸಾರಿಗೆ, ಜೀವ ವಿಮೆ ವ್ಯವಸ್ಥೆ ಕಲ್ಪಿಸಬೇಕೆಂದು ಕೇಳಿಕೊಂಡಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಲಭ್ಯವಿರುವ ವೆಂಟಿಲೇಟರ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಮತ್ತು ಬೆಡ್ಗಳನ್ನು ಸಹ ಕನಿಷ್ಟವೆಂದರೂ 30-40 ಪಟ್ಟು ಹೆಚ್ಚಿಸಬೇಕು. ರಾಜ್ಯ, ಕೇಂದ್ರಗಳಲ್ಲಿ ಲಭ್ಯವಿಲ್ಲದಿದ್ದರೆ, ಲಭ್ಯವಿರುವ ದೇಶಗಳಿಂದ ಆಮದು ಮಾಡಿಕೊಳ್ಳಬೇಕು. ಇವುಗಳನ್ನು ಮುಂದಿನ 4-5 ದಿನಗಳಲ್ಲಿ ಮಾಡಿ ಮುಗಿಸಬೇಕು. ಅದುವರೆಗೆ ನಮ್ಮಲ್ಲಿರುವ ವೆಂಟಿಲೇಟರ್ಗಳು, ಆಕ್ಸಿಜನ್ ಸಿಲಿಂಡರ್ಗಳು, ಅವುಗಳಿಗೆ ಪೂರಕವಾದ ಉಪಕರಣಗಳನ್ನು ಸರ್ವ ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ರೆಮ್ಡಿಸಿವಿರ್ ಸೇರಿದಂತೆ ಎಲ್ಲಾ ಜೀವ ರಕ್ಷಕ ಔಷಧಗಳನ್ನು ಕೇಂದ್ರದಿಂದ ಒತ್ತಾಯ ಮಾಡಿ ಪಡೆದುಕೊಳ್ಳಬೇಕು. ಇಡೀ ಜಗತ್ತಿನಲ್ಲಿಯೇ ಅತಿ ಹೆಚ್ಚು ಔಷಧಗಳ ಉತ್ಪಾದನೆ ನಮ್ಮ ದೇಶದಲ್ಲಿಯೇ ಆಗುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಕೋವಿಡ್ ಸಮಸ್ಯೆ ಭೀಕರತೆ ತಲುಪಿರುವಾಗಲೇ ದೇಶ 11 ಲಕ್ಷ ರೆಮ್ಡಿಸಿವಿಯರ್ ಲಸಿಕೆಗಳನ್ನು ರಫ್ತು ಮಾಡಿದೆ. ನಿರ್ಲಕ್ಷ್ಯದ ಪರಮಾವಧಿ ಇದು. ಕೂಡಲೇ ರಫ್ತನ್ನು ನಿಲ್ಲಿಸಿ, ಉತ್ಪಾದನೆಯನ್ನು ಹೆಚ್ಚಿಸುವಂತೆ ಹಾಗೂ  ಅಗತ್ಯವಿರುವಷ್ಟು ರೆಮ್ಡಿಸಿವಿರ್ ಔಷಧಗಳನ್ನು ಒದಗಿಸುವಂತೆ ಕೇಂದ್ರವನ್ನು ಆಗ್ರಹಿಸಿ, ಲಸಿಕೆಗಳನ್ನು ಪಡೆದು ಚಿಕಿತ್ಸೆ ನೀಡಬೇಕು.

ರಾಜ್ಯದಲ್ಲಿ ಪ್ರತಿದಿನ ಎಷ್ಟು ಆಕ್ಸಿಜನ್ ವ್ಯವಸ್ಥೆಯುಳ್ಳ ಬೆಡ್ಗಳನ್ನು ಹೆಚ್ಚಿಸಲಾಯಿತು? ಎಷ್ಟು ವೆಂಟಿಲೇಟರ್ ವ್ಯವಸ್ಥೆಯುಳ್ಳ ಹಾಸಿಗೆಗಳನ್ನು ಹೆಚ್ಚಿಸಲಾಯಿತು? ಎಂದು ಪ್ರತಿದಿನ ಪ್ರಕಟಣೆ ಹೊರಡಿಸಬೆಕು.

ಪ್ರಸ್ತುತ  ಮಾಧ್ಯಮಗಳ ಗಮನವೆಲ್ಲಾ  ಬೆಂಗಳೂರನ್ನು ಕೇಂದ್ರೀಕರಿಸಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಪರಿಸ್ಥಿತಿ ಭೀಕರವಾಗುತ್ತಿದೆ. ಹೀಗಾಗಿ ಪ್ರತಿ ಜಿಲ್ಲೆ, ತಾಲ್ಲೂಕುಗಳಲ್ಲೂ ಅಗತ್ಯವಿರುವ ವ್ಯವಸ್ಥೆಯನ್ನು ಮಾಡಬೇಕು. ಏನು ಮಾಡಲಾಗಿದೆ ಎಂದು ಪ್ರಕಟಣೆಗಳನ್ನು ಹೊರಡಿಸಿ, ಜನರಲ್ಲಿ ಧೈರ್ಯ ಹುಟ್ಟಿಸಬೇಕು. ರಾಜ್ಯದಲ್ಲಿ ಅನೇಕ ಜೀವ ರಕ್ಷಕ ಔಷಧಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿಗಳು ಬರುತ್ತಿವೆ. ಈ ಕುರಿತಂತೆ ಔಷಧ ನಿಯಂತ್ರಣ ಮಂಡಳಿ, ಪೊಲೀಸರು ನಿರಂತರ ದಾಳಿಗಳನ್ನು ನಡೆಸಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಹಾಸನ ಮುಂತಾದ ಜಿಲ್ಲಾ ಕೇಂದ್ರಗಳಲ್ಲಿರುವ ಖಾಸಗಿ ಆಸ್ಪತ್ರೆಗಳು ಪ್ರತಿ ರೋಗಿಯಿಂದ ದಿನಕ್ಕೆ 40-50 ಸಾವಿರ ರೂಪಾಯಿಗಳನ್ನು ವಸೂಲಿ ಮಾಡುತ್ತಿರುವ ದೂರುಗಳು ಬರುತ್ತಿವೆ. ಸರ್ಕಾರ ಈ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಅವುಗಳನ್ನು ಪಾಲಿಸದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

ಕೋವಿಡ್ ಸೋಂಕು ದೇಶಕ್ಕೆ ಬಂದು 15 ತಿಂಗಳುಗಳಾದರೂ ಸಹ ರೋಗದ ಕುರಿತು, ಚಿಕಿತ್ಸೆಯ ಕುರಿತು, ಔಷಧಗಳ ಕುರಿತು, ಲಸಿಕೆಗಳ ಕುರಿತು ಸ್ಪಷ್ಟವಾದ ವೈಜ್ಞಾನಿಕ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ. ಈ ಕೂಡಲೆ ಮಾರ್ಗಸೂಚಿಗಳನ್ನು ಹೊರಡಿಸಿ, ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಕೋವಿಡ್ ಸೋಂಕಿತರಿಗೆ ಈ ಸೋಂಕು ತಗಲುವ ಮೊದಲೆ ಸಕ್ಕರೆ ಖಾಯಿಲೆ, ರಕ್ತದೊತ್ತಡ, ಥೈರಾಯ್ಡ್ ಸಮಸ್ಯೆ, ಹೃದಯ, ಕಿಡ್ನಿ, ಲಿವರ್, ಮೆದುಳು ಸಮಸ್ಯೆಗಳಿದ್ದರೆ ಅವುಗಳಿಗೆ ನಿಯಮಿತವಾಗಿ ನೀಡಲಾಗುವ ಔಷಧಗಳನ್ನು ನೀಡುವುದರ ಜೊತೆಯಲ್ಲಿಯೇ ಕರೋನಾಗೆ ಚಿಕಿತ್ಸೆ ನೀಡಬೇಕು. ಅನೇಕ ರೋಗಿಗಳಿಗೆ ಈ ಔಷಧಗಳನ್ನು ನೀಡದೆ ಬರೀ ಕೊರೋನಾ ವೈರಸ್ಗೆ ಮಾತ್ರ ಚಿಕಿತ್ಸೆ ನೀಡಲಾರಂಭಿಸಿರುವುದರಿಂದ ರೋಗಿಗಳು ಮರಣ ಹೊಂದುತ್ತಿದ್ದಾರೆಂದು ದೂರುಗಳು ಬರುತ್ತಿವೆ. ಈ ಕೂಡಲೇ ಈ ಅವ್ಯವಸ್ಥೆ ತಪ್ಪಿಸಬೇಕೆಂದು ಸಲಹೆ ಕೊಟ್ಟಿದ್ದಾರೆ.

ಕೋವಿಡ್ ಸೋಂಕಿಗೆ ನೀಡಲಾಗುತ್ತಿರುವ ಲಸಿಕೆಗಳ ವಿಚಾರದಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಜನರಿಗೆ ದ್ರೋಹ ಮಾಡುತ್ತಿವೆ. ತಜ್ಞರ ಸಲಹೆ ಮೇರೆಗೆ ಅರ್ಹರಾಗಿರುವ ಎಲ್ಲಾ ವಯೋಮಾನದವರಿಗೂ ಸಹ ಉಚಿತವಾಗಿ ಲಸಿಕೆಗಳನ್ನು ನೀಡಬೇಕೆಂದು ಕೇಳಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಕನಿಷ್ಟ 10 ಕೋಟಿಯಷ್ಟು ಲಸಿಕೆಗಳನ್ನು, ಪ್ರತಿ ಲಸಿಕೆಗೆ ರೂ.400 ರೂಗಳನ್ನು ನೀಡಿ ಖರೀದಿಸುತ್ತದೆ ಎಂದರೆ ರೂ.4000 ಕೋಟಿಗಳಷ್ಟು ಜನರ ತೆರಿಗೆಯ ಹಣವನ್ನು ಪಾವತಿಸಿ ಪಡೆಯುತ್ತದೆ ಎಂದು ಅರ್ಥ. ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ರೂ.35 ಸಾವಿರ ಕೋಟಿಗಳನ್ನು ಲಸಿಕೆ ವಿತರಿಸಲು ವಿನಿಯೋಗಿಸುವುದಾಗಿ ಹೇಳಿತ್ತು. ಅದರಂತೆ ರಾಜ್ಯ ಮತ್ತು ರಾಷ್ಟ್ರದ ಜನರಿಗೆ ಉಚಿತವಾಗಿ ಲಸಿಕೆಗಳನ್ನು ನೀಡಬೇಕು. ರಾಜ್ಯವು ನಯಾ ಪೈಸೆಯನ್ನು ನೀಡದೆ ಲಸಿಕೆಗಳನ್ನು ಪಡೆದುಕೊಳ್ಳಬೇಕು. ಇದಕ್ಕಾಗಿ ರಾಜ್ಯದ ಸಂಸದರು ಪ್ರಧಾನಿಗಳನ್ನು ಒತ್ತಾಯಿಸಬೇಕೆಂದು ಸಲಹೆ ನೀಡಿದ್ದಾರೆ.

ರಾಜ್ಯದಿಂದ ರೂ.2.5 ಲಕ್ಷ ಕೋಟಿಗಳಿಗೂ ಹೆಚ್ಚು ತೆರಿಗೆ ಸಂಗ್ರಹಿಸುವ ಕೇಂದ್ರವು ಈ ವರ್ಷ ರಾಜ್ಯಕ್ಕೆ ತೆರಿಗೆ ಹಂಚಿಕೆ ಮಾಡಿರುವುದು ಕೇವಲ ರೂ.21,694 ಕೋಟಿಗಳು ಮಾತ್ರ. ಕೇಂದ್ರ ಸರ್ಕಾರದ ನೀತಿಗಳಿಂದ ರಾಜ್ಯ ನಿರಂತರವಾಗಿ ಬಸವಳಿದು ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಲಸಿಕೆಗಳಿಗೆ ಹಣ ಪಡೆಯುವುದನ್ನು ಸರ್ಕಾರ, ಮುಖ್ಯಮಂತ್ರಿಗಳು, ಸಂಸದರು ಬಾಯಿ ಮುಚ್ಚಿಕೊಂಡಿರುವುದನ್ನು ಸಹಿಸಲಾಗುವುದಿಲ್ಲ. ನಿಮ್ಮ ಮೌನದಿಂದಲೆ ರಾಜ್ಯ ದಿವಾಳಿಯಾಗುತ್ತಿದೆ. ಆದ್ದರಿಂದ ಈಗಲಾದರೂ ಧ್ವನಿ ಎತ್ತರಿಸಿ, ಪ್ರಶ್ನಿಸಿ, ಪ್ರತಿಭಟಿಸಿ, ಲಸಿಕೆಗಳನ್ನು ಉಚಿತವಾಗಿ ಪಡೆದು ಆಂದೋಲನದ ಮಾದರಿಯಲ್ಲಿ ಲಸಿಕೆ ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Previous Post

ಕೋವಿಡ್ ಬಿಕ್ಕಟ್ಟಿಗೆ ಮೋದಿಯನ್ನು ದೂಷಿಸಿದ ‘ದಿ ಆಸ್ಟ್ರೇಲಿಯಾ’ ವರದಿ ದುರುದ್ದೇಶ ಪೂರಿತ: ಇಂಡಿಯನ್ ಹೈ ಕಮಿಷನ್

Next Post

ಮನದ ಮಾತುಗಳು ಸಾಕಾಗಿದೆ. ನಮ್ಮ ಮನದಲ್ಲೂ ಮಾತುಗಳಿವೆ. ಆಲಿಸಲು ಸಾಧ್ಯವೇ.. ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮನದ ಮಾತುಗಳು ಸಾಕಾಗಿದೆ. ನಮ್ಮ ಮನದಲ್ಲೂ ಮಾತುಗಳಿವೆ. ಆಲಿಸಲು ಸಾಧ್ಯವೇ.. ?

ಮನದ ಮಾತುಗಳು ಸಾಕಾಗಿದೆ. ನಮ್ಮ ಮನದಲ್ಲೂ ಮಾತುಗಳಿವೆ. ಆಲಿಸಲು ಸಾಧ್ಯವೇ.. ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada