ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಜ್ವರದಿಂದ ಬಳಲುತ್ತಿದ್ದು, ಅವರನ್ನು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಹೇಳಲಾಗಿದೆ.
ಗುರುವಾರ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.
ಜ್ವರದಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರಿಗೆ ಗಂಗಾರಾಮ್ ಆಸ್ಪತ್ರೆಯ ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಮತ್ತು ಅವರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ. ಎಸ್. ರಾಣಾ ತಿಳಿಸಿದ್ದಾರೆ.
ವೈದ್ಯರ ತಂಡ ಸೋನಿಯಾ ಗಾಂಧಿ ಅವರ ನಿಗಾ ವಹಿಸಿದೆ. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆಗಳು ನಡೆಯುತ್ತಿವೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬುಲೆಟಿನ್’ನಲ್ಲಿ ಉಲ್ಲೇಖಿಸಲಾಗಿದೆ.