• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಅಸ್ತ್ರ ಬಿಟ್ಟ ಮೋದಿ ವಿರುದ್ಧ ಕಾಂಗ್ರೆಸ್‌ ಲೀಡರ್ಸ್‌ ಗರಂ..!

ಪ್ರತಿಧ್ವನಿ by ಪ್ರತಿಧ್ವನಿ
November 2, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಾಂಗ್ರೆಸ್‌ ಪಕ್ಷದಲ್ಲಿ ಗ್ಯಾರಂಟಿ ವಿಚಾರ ತಿರುಗುಬಾಣ ಆಗುವ ಸಾಧ್ಯತೆಗಳು ಕಾಣಿಸುತ್ತಿವೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣವನ್ನು ಕಡಿತ ಮಾಡುವ ಬಗ್ಗೆ ಚಿಂತನೆ ನಡೀತಿದೆ. ಅವಶ್ಯಕತೆ ಇಲ್ಲದವರಿಗೆ ಉಚಿತ ಬಸ್‌ ವ್ಯವಸ್ಥೆ ತೆಗೆಯುವ ಬಗ್ಗೆ ಚಿಂತನೆ ನಡೆದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದ ಒಂದು ಹೇಳಿಕೆ ರಾಜಕಾರಣದ ಮೇಲೆ ಪ್ರಭಾವ ಬೀರುವ ಆತಂಕ ಸೃಷ್ಟಿಸಿದೆ. ಡಿ.ಕೆ ಶಿವಕುಮಾರ್‌ ಮಾತನ್ನೇ ಅಸ್ತ್ರವಾಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ADVERTISEMENT

ಕರ್ನಾಟಕದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಿತ್ತಾಟದ ಬಗ್ಗೆ ಪ್ರಸ್ತಾಪ ಮಾಡಿರುವ ಮೋದಿ, ಅಭಿವೃದ್ಧಿ ಬದಲು ರಾಜ್ಯವನ್ನ ಲೂಟಿ ಮಾಡುತ್ತಿದೆ. ಈಗ ಇರುವ ಸ್ಕೀಮ್‌ಗಳನ್ನ ಹಿಂಪಡೆಯಲು ಹೊರಟಿದ್ದಾರೆ ಎಂದು ಟೀಕಿಸಿದ್ದರು.ಇನ್ನು ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಸಿಗುತ್ತಿಲ್ಲ.ಸಾಲ ಮನ್ನಾಕ್ಕಾಗಿ ತೆಲಂಗಾಣ ರೈತರು ಕಾಯುತ್ತಿದ್ದಾರೆ.ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಕೆಲ ಭರವಸೆ ನೀಡಿದ್ದರು. ಆದ್ರೆ ಭರವಸೆಗಳು 5 ವರ್ಷಗಳಾದ್ರೂ ಜಾರಿಯಾಗಲಿಲ್ಲ. ಹಿಮಾಚಲ, ಕರ್ನಾಟಕದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಡುತ್ತಿದೆ.ಜನರೆದುರು ಕಾಂಗ್ರೆಸ್‌ ನಕಲಿ ಭರವಸೆಗಳ ಅನಾವರಣ ಆಗ್ತಿದೆ ಎಂದಿದ್ದರು.

ಪ್ರಧಾನಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಗ್ಯಾರಂಟಿ ಸ್ಕೀಂ ಬಗ್ಗೆ ಪ್ರಧಾನಿ ಮೋದಿ ಲೇವಡಿಗೆ ಸಿಎಂ ತಿರುಗೇಟು ನೀಡಿದ್ದು, ಕಾಂಗ್ರೆಸ್‌ ಕೊಟ್ಟ ಭರವಸೆ ಎಲ್ಲವನ್ನೂ ಈಡೇರಿಸಿದ್ದೇವೆ. ಗ್ಯಾರಂಟಿ ಸ್ಕೀಂಗೆ 56 ಸಾವಿರ ಕೋಟಿಗೂ ಹೆಚ್ಚು ಮೀಸಲು ಇಟ್ಟಿದ್ದೇವೆ. ಶೇಕಡ 40ರಷ್ಟು ಕಮಿಷನ್​ ಮೂಲಕ ಬಿಜೆಪಿ ರಾಜ್ಯವನ್ನು ಲೂಟಿ ಮಾಡಿದೆ.

ಬೆರಳು ಮಾಡುವ ಮುನ್ನ ಬಿಜೆಪಿಯತ್ತ ನೋಡಿ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಮೋದಿಯವರೇ ಹಳದಿ ಕನ್ನಡಕದಿಂದ ನೋಡಬೇಡಿ. ರಾಜ್ಯದ ಅಭಿವೃದ್ದಿ ಮಾದರಿಯನ್ನು ಅರ್ಥ ಮಾಡಿಕೊಳ್ಳಿ. ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿ ಅನುಷ್ಠಾನ ಆಗಿದೆ. ತೆರಿಗೆ ಸಂಗ್ರಹ ಹೆಚ್ಚಾಗಿದೆ, ಆರ್ಥಿಕತೆಗೆ ಬಲ ಸಿಕ್ಕಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು. ಆದರೆ ನೀವು ಸುಳ್ಳಿನ ಬಾಣಗಳಿಂದ ಕನ್ನಡಿಗರನ್ನು ಅವಮಾನಿಸಿದ್ದೀರಿ.ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕೂಡ ಕಿಡಿ ಕಾರಿದ್ದು, ಎಕ್ಸ್ ಮೂಲಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನಿಡಿದ್ದಾರೆ. 140 ಕೋಟಿ ಭಾರತೀಯರ ಮೇಲಿನ ಕ್ರೂರ ಜೋಕ್ ಎಂದು ವ್ಯಂಗ್ಯವಾಡಿದ್ದಾರೆ. ಸಬ್​ ಕಾ ಸಾಥ್, ಸಬ್​ ಕಾ ವಿಕಾಸ್ ಏನಾಯ್ತು..? ನೀರವ್ ಮೋದಿ, ಚೋಕ್ಸಿ, ಮಲ್ಯ ಪರಾರಿಗೆ ಸಹಕಾರ ಕೊಟ್ಟಿದ್ದು ಯಾರು ಎಂದು ಎಕ್ಸ್‌ ಮೂಲಕ ಪ್ರಧಾನಿ ಮೋದಿಗೆ ವ್ಯಂಗ್ಯವಾಡಿದ್ದಾರೆ. ಎಲೆಕ್ಟೋರಲ್ ಬಾಂಡ್‌ಗಳ ಮೂಲಕ ಲೂಟಿ ಮಾಡಿದ್ರಿ, ನಾವು ಲಂಚ ತಿನ್ನಲ್ಲ, ತಿನ್ನಲು ಬಿಡಲ್ಲ ಅಂತ ಹೇಳಿದ್ರಿ, ನಿಮ್ಮ ವಿಕಸಿತ ಭಾರತ ಎಲ್ಲಿವರೆಗೆ ಬಂದಿದೆ..? ನಿಮ್ಮ ಅಚ್ಚೇ ದಿನ್ ಏನಾಯ್ತು ಪ್ರಧಾನಿಯವರೇ..? ವರ್ಷಕ್ಕೆ 2 ಕೋಟಿ ಉದ್ಯೋಗಗಳ ಭರವಸೆ ಏನಾಯ್ತು..? ಎಂದು ಕುಟುಕಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್‌ ಕೂಡ ಕಿಡಿ ಕಾರಿದ್ದು, ರಾಜ್ಯದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಮೋದಿ ಅವರನ್ನು ಅವರದೇ ಕಚೇರಿ ದಾರಿತಪ್ಪಿಸಿದೆ ಎಂದಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ಸೋಲಿನ ಭಯದಿಂದಾಗಿ ಅನಾವಶ್ಯಕ ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ ಎಂದು ಬೆನ್ನು ತಟ್ಟಿಕೊಂಡಿದ್ದಾರೆ.

Tags: against ModiCM Siddaramaiah‌Congress leaders are furiousCongress PartyDCM DK Shivakumarfree bus travel for womenguarantee issue
Previous Post

ಒಡಿಶಾದ ಕರಕುಶಲ ವಸ್ತುಗಳಿಗೆ ಹೆಸರಾದ ಪಿಪಿಲಿ ಗ್ರಾಮ ನಿರ್ಲಕ್ಷ್ಯ ; ಅಭಿವೃದ್ದಿಗೆ ಕರಕುಶಲ ಕರ್ಮಿಗಳ ಆಗ್ರಹ

Next Post

ದರ್ಶನ್‌ಗೆ ಸರ್ಜರಿ ಯಾವತ್ತು..? BGS ವೈದ್ಯರು ಮಾಡಿದ ನಿರ್ಧಾರ ಏನು..?

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post

ದರ್ಶನ್‌ಗೆ ಸರ್ಜರಿ ಯಾವತ್ತು..? BGS ವೈದ್ಯರು ಮಾಡಿದ ನಿರ್ಧಾರ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada