ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು.

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.

ಇಂದಿರಾ ಗಾಂಧಿಯ ಅವರ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ʼಇಂದಿರಾ ಗಾಂಧಿಯವರ ಸರಳತೆ ಮತ್ತು ಕ್ರಿಯಾಶೀಲ ನಾಯಕತ್ವ, ರಾಜಕೀಯ ಧೈರ್ಯವು ಶಾಶ್ವತವಾಗಿ ಸ್ಫೂರ್ತಿಯಾಗಿದೆ. ಅವರ ಅಚಲ ಸಂಕಲ್ಪ ಮತ್ತು ಜೀವಮಾನದ ಸೇವೆಗೆ ಅವರ ಸಮರ್ಪಣೆ, ಭಾರತದ ಪ್ರಗತಿಯ ಪಯಣದಲ್ಲಿ ಅಳಿಸಲಾಗದ ಗುರುತು ಬಿಟ್ಟಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಅವರ ಅಂತಿಮ ತ್ಯಾಗವು ಕೋಟ್ಯಂತರ ನಮನಗಳಿಗೆ ಅರ್ಹವಾಗಿದೆʼ ಎಂದು ಬರೆದುಕೊಂಡಿದ್ದಾರೆ.











