• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ; ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ಪ್ರತಿಧ್ವನಿ by ಪ್ರತಿಧ್ವನಿ
September 21, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕಪಟ ನಾಟಕ ನಿಲ್ಲಿಸಿ;  ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery water Management Authority) ಹೇಳಿತು ಎಂದ ಮಾತ್ರಕ್ಕೆ ತಮಿಳುನಾಡಿಗೆ ಕಾವೇರಿ ನೀರು (Cauvery water dispute) ಹರಿಸಿದ್ದು ಅಕ್ಷಮ್ಯ ಅಪರಾಧ ಎಂದು ಚಿತ್ರನಟರೂ ರಾಜಕಾರಣಿಯೂ ಆಗಿರುವ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿದು ಚಿತ್ರ ನಟಿ ಸುಮಲತಾ ಅವರ ವಿರುದ್ಧ ಸೋಲನುಭವಿಸಿದ್ದ ನಿಖಿಲ್‌ ಈಗ ಮಂಡ್ಯದ ಜನರ ಆಶೋತ್ತರಗಳೆಂಬಂತೆ ಕಾವೇರಿ ಬಗ್ಗೆ ಧ್ವನಿ ಎತ್ತಿದ್ದಾರೆ. ಇದರ ಜತೆಗೆ ಚಿತ್ರ ನಟರು ಯಾರೂ ಕಾವೇರಿ ವಿಚಾರದಲ್ಲಿ ಮಾತಾಡುತ್ತಿಲ್ಲ. ಬಾಯಿಗೆ ಪ್ಲಾಸ್ಟರ್‌ ಹಾಕಿಕೊಂಡು ಕೂತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾದ ಬೆನ್ನಿಗೇ ನಿಖಿಲ್‌ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

ಇದರಲ್ಲಿ ರಾಜ್ಯ ಸರ್ಕಾರದ ವಿರುದ್ಧ, ನಾಯಕರ ವಿರುದ್ಧ ಅವರು ಗರಂ ಆಗಿದ್ದಾರೆ. ಗುರುವಾರ ನಡೆದ ವಿಚಾರಣೆಯ ವೇಳೆ ಸುಪ್ರೀಂಕೋರ್ಟ್‌ ಕಾವೇರಿ ನದಿ ಪ್ರಾಧಿಕಾರ ನೀಡಿದ ತೀರ್ಪು ಸರಿಯಾಗಿದೆ. ಮುಂದಿನ 10 ದಿನಗಳ ವರೆಗೆ ದಿನವೂ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಿ ಎಂದು ರಾಜ್ಯಕ್ಕೆ ಕಟ್ಟಾಜ್ಞೆ ವಿಧಿಸುವುದಕ್ಕೆ ಮೊದಲು ಟ್ವೀಟ್‌ ಮಾಡಿದ ನಿಖಿಲ್‌ ಕುಮಾರಸ್ವಾಮಿ ಅವರ ಆಕ್ರೋಶದ ನುಡಿಗಳು ಇಲ್ಲಿವೆ

ರಾಜ್ಯದ ಹಿತಾಸಕ್ತಿ ಕಡೆಗಣಿಸುವ ಕೃತ್ಯವನ್ನು ಖಂಡಿಸುತ್ತೇನೆ

ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.

ಕಾಂಗ್ರೆಸ್‌ಗೆ ಕಾವೇರಿ ಎನ್ನುವುದು ಲಾಭದ ವಿಚಾರವಾಗಿಯೇ ಉಳಿದಿದೆ

ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ.

Tags: JDSJDS KarnatakaKaveri RiverNikhil Kumaraswamynikilkumarswamy
Previous Post

ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ನೀರು ವಿವಾದ.. ನೀರು ಬಿಡಿ ಅಷ್ಟೇ..

Next Post

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada