Sen ರಾಜ್ಯ ರಾಜಕಾರಣ (State Politics) ಬಿರುಸುಗೊಂಡಿದ್ದು ಪ್ರತಿನಿತ್ಯ ಒಂದಿಲ್ಲೊಂದು ಸಂಚಲನ ಸೃಷ್ಟಿಸುವ ಬೆಳವಣಿಗೆಗಳು ನಡೆಯುತ್ತಲೇ ಇವೆ. ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಜೆಡಿಎಸ್ (Jds) ಪಕ್ಷದ 10 ಶಾಸಕರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ (Congress) ಪ್ರಯತ್ನ ಪಟ್ಟಿದೆ ಎನ್ನಲಾಗಿದೆ.

ಹೌದು, ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, JDS ಶಾಸಕರನ್ನು ಆಪರೇಷನ್ ಹಸ್ತ ಮಾಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ಭಾಗವಾಗಿ ಜೆಡಿಎಸ್ ಪಕ್ಷದ 6 ಶಾಸಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ.

ಇದಿಷ್ಟೇ ಅಲ್ಲದೆ, ಒಟ್ಟು ಜೆಡಿಎಸ್ ನ 10 ಶಾಸಕರ ಸಂಪರ್ಕಕ್ಕೆ ಪ್ರಯತ್ನಿಸಲಾಗಿದ್ದು, ಅದರಲ್ಲೂ ಬಿಜೆಪಿ ವಿರುದ್ಧ ಗೆದ್ದಿರುವ JDS ಶಾಸಕರನ್ನು ಸಳೆಯಲು ಮೊದಲು ಆದ್ಯತೆ ನೀಡಿದ್ದಾರೆ ಎನ್ನಲಾಗಿದೆ. ಈ ಪೈಕಿ ದೇವದುರ್ಗ ಶಾಸಕಿ ಕರೆಮ್ಮ, ಶಾಸಕ ಸಮೃದ್ಧಿ ಮಂಜುನಾಥ್ ಸೇರಿ ಹಲವು ಶಾಸಕರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.