• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ನಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ : ಬಿಜೆಪಿ ಕೆಂಡಾಮಂಡಲ!

ಪ್ರತಿಧ್ವನಿ by ಪ್ರತಿಧ್ವನಿ
November 10, 2021
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ನಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ : ಬಿಜೆಪಿ ಕೆಂಡಾಮಂಡಲ!
Share on WhatsAppShare on FacebookShare on Telegram

ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗದ (Central Water Commission) ಅನುಮತಿ ಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್‌ ಇತ್ತೀಚೆಗೆ ಬಿಜೆಪಿಯ ಆಡಳಿತ ವೈಫಲ್ಯದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಪ್ರಶ್ನೆ ಮಾಡುತ್ತಿದ್ದು, ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪಿಸಿ ಪಾದ ಯಾತ್ರೆ ನಡೆಸಿ ಬಿಜೆಪಿಗೆ ಮುಖಭಂಗ ಉಂಟುಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ. ಇದಕ್ಕೆ ಉತ್ತರಿಸಿದ ಸಿಎಂ ಬಸವರಾಜ್‌ ಬೊಮ್ಮಾಯಿ ಈ ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗದ ಅನುಮತಿ ಅಗತ್ಯ ಎಂದು ಕಾಂಗ್ರೆಸ್‌ ಗೆ ತಿರುಗೇಟು ನೀಡಿದ್ದಾರೆ.

ADVERTISEMENT

ಇದರ ಬೆನ್ನಲ್ಲೇ ಈ ಸಿಎಂ ಹೇಳಿಕೆ ಉಲ್ಲೇಖಿಸಿ ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಗಳನ್ನು ಮಾಡಿದೆ. ಮೊದಲ ಟ್ವೀಟ್‌ ನಲ್ಲಿ ‘ಮೇಕೆದಾಟು ಯೋಜನೆ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಸರ್ಕಾರ ಕಾನೂನು ಹೋರಾಟ ಮಾಡುತ್ತಿದೆ. ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗದ ಅನುಮತಿ ಬೇಕಾಗಿದೆ. ಶೀಘ್ರವೇ ಅನುಮತಿ ಲಭಿಸುವ ವಿಶ್ವಾಸವಿದೆ. ಅನುಮತಿ ಸಿಗುತ್ತಿದ್ದಂತೆಯೇ ಯೋಜನೆ ಜಾರಿಗೊಳಿಸುತ್ತೇವೆ’ ಎಂದು ಹೇಳಲಾಗಿದೆ.

ಮೇಕೆದಾಟು ಯೋಜನೆ ಪ್ರಕರಣ ಈಗ ನ್ಯಾಯಾಲಯದಲ್ಲಿದೆ. ಸರ್ಕಾರ ಕಾನೂನು ಹೋರಾಟ ಮಾಡುತ್ತಿದೆ. ಯೋಜನೆ ಜಾರಿಗೆ ಕೇಂದ್ರ ಜಲ ಆಯೋಗದ ಅನುಮತಿ ಬೇಕಾಗಿದೆ.

ಶೀಘ್ರವೇ ಅನುಮತಿ ಲಭಿಸುವ ವಿಶ್ವಾಸವಿದೆ. ಅನುಮತಿ ಸಿಗುತ್ತಿದ್ದಂತೆಯೇ ಯೋಜನೆ ಜಾರಿಗೊಳಿಸುತ್ತೇವೆ.

ಶ್ರೀ @BSBommai
ಸನ್ಮಾನ್ಯ ಮುಖ್ಯಮಂತ್ರಿಗಳು#ಮೇಕೆದಾಟು

— BJP Karnataka (@BJP4Karnataka) November 9, 2021

ಇದಾದ ಬಳಿಕ ಮತ್ತೆ ಟ್ವೀಟ್‌ ಟಾಂಗ್‌ ಮುಂದುವರೆಸಿದ ಬಿಜೆಪಿ, ‘ಮೇಕೆದಾಟು ಯೋಜನೆ ಡಿಪಿಆರ್ ತಯಾರಿಸಲು ಕಾಂಗ್ರೆಸ್ ಸರ್ಕಾರ ಹಲವು ವರ್ಷಗಳನ್ನೇ ತೆಗೆದುಕೊಂಡಿತು. ಆಗಲೇ ತ್ವರಿತವಾಗಿ ಡಿಪಿಆರ್ ಸಿದ್ಧಪಡಿಸಿ ಯೋಜನೆಯನ್ನು ಜಾರಿ ಮಾಡುವ ಬದ್ಧತೆ ಏಕೆ ತೋರಲಿಲ್ಲ..?’ ಎಂದು ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ. ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಯನ್ನು ಏಕೆ ಜಾರಿಗೊಳಿಸಲಿಲ್ಲ..? ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವಂತೆ ಪಾದಯಾತ್ರೆ ಹೆಸರಿನಲ್ಲಿ ಈಗ ಸರ್ಕಾರದ ಮೇಲೆ ಒತ್ತಡ ಹೇರುವ ತಂತ್ರವನ್ನು ಕಾಂಗ್ರೆಸ್ ಅನುಸರಿಸುತ್ತಿದೆ’ ಎಂದು ಬಿಜೆಪಿ ಕಿಡಿ ಕಾರಿದೆ.

ಮೇಕೆದಾಟು ಯೋಜನೆ ಡಿಪಿಆರ್ ತಯಾರಿಸಲು ಕಾಂಗ್ರೆಸ್ ಸರ್ಕಾರ ಹಲವು ವರ್ಷಗಳನ್ನೇ ತೆಗೆದುಕೊಂಡಿತು.

ಆಗಲೇ ತ್ವರಿತವಾಗಿ ಡಿಪಿಆರ್ ಸಿದ್ಧಪಡಿಸಿ ಯೋಜನೆಯನ್ನು ಜಾರಿ ಮಾಡುವ ಬದ್ಧತೆ ಏಕೆ ತೋರಲಿಲ್ಲ?

ಶ್ರೀ @BSBommai
ಸನ್ಮಾನ್ಯ ಮುಖ್ಯಮಂತ್ರಿಗಳು#ಮೇಕೆದಾಟು

— BJP Karnataka (@BJP4Karnataka) November 9, 2021

ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಈ ಹಿಂದೆ ಸಿಎಂ ಬೊಮ್ಮಾಯಿ ಹೇಳಿದ್ದರು. ಕುಡಿಯುವ ನೀರಿನ ಉದ್ದೇಶದಿಂದ ರೂಪಿಸಿರುವ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ. ಯೋಜನೆ ಜಾರಿ ಸಂಬಂಧ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದೂ ಕೂಡ ಅವರು ಭರವಸೆ ವ್ಯಕ್ತಪಡಿಸಿದ್ದರು.

ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಈಗಾಗಲೇ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕು ರಾಜ್ಯಕ್ಕಿದೆ. ರಾಜ್ಯದ ಜನರ ಹಿತ ರಕ್ಷಣೆಗಾಗಿ ನೂರಕ್ಕೆ ನೂರರಷ್ಟು ಯೋಜನೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯೊ ಹೇಳಿದ್ದರು.

ಇನ್ನು ಮೇಕದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕದಾಟುವಿನಿಂದ ಬೆಂಗಳೂರಿನವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

Tags: Congress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತುಮರಿ ಶಾಲೆ ವಿವಾದ: ಭೂ ಮಾಫಿಯಾ ಜೊತೆ ಕೈಜೋಡಿಸಿದರೆ ಸಾಗರ ತಹಶೀಲ್ದಾರ್?

Next Post

ಅಕ್ರಮ ಬಂಧನ ಬಲವಂತದ ಮದುವೆ: ಛತ್ತೀಸ್ಗಢದಲ್ಲೊಂದು ಅನಾಗರಿಕ ಡಿಟೆನ್ಷನ್ ಕ್ಯಾಂಪ್

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಅಕ್ರಮ ಬಂಧನ ಬಲವಂತದ ಮದುವೆ: ಛತ್ತೀಸ್ಗಢದಲ್ಲೊಂದು ಅನಾಗರಿಕ ಡಿಟೆನ್ಷನ್ ಕ್ಯಾಂಪ್

ಅಕ್ರಮ ಬಂಧನ ಬಲವಂತದ ಮದುವೆ: ಛತ್ತೀಸ್ಗಢದಲ್ಲೊಂದು ಅನಾಗರಿಕ ಡಿಟೆನ್ಷನ್ ಕ್ಯಾಂಪ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada