ಕರ್ನಾಟಕದಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹತ್ತು ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಈ ವೇಳೆ ಸಾವಿರಾರು ಮಂದಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾರಣ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕೋವಿಡ್ ಮಾರ್ಗಸೂಚಿಗಳನ್ನು ಕರ್ನಾಟಕ ಕಾಂಗ್ರೆಸ್ ಉಲ್ಲಂಘಿಸಿದೆ. ಮಾರ್ಗಸೂಚಿ ಉಲ್ಲಂಘಿಸಿದ್ದ ಕಾರಣ 35 ಜನ ಕಾಂಗ್ರೆಸ್ ಮುಖಂಡರ ವಿರುದ್ದ ರಾಜ್ಯ ಸರ್ಕಾರ ಪ್ರಕರಣವನ್ನ ದಾಖಲಿಸಿದೆ.
ಭಾನುವಾರ ನಡೆದ ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದಕ್ಕಾಗಿ ಸ್ಥಳೀಯ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಇತರೆ 33 ಮಂದಿಯ ವಿರುದ್ದ ಎಫ್ಐಆರ್ ಅನ್ನು ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ʻಕೋವಿಡ್ ನಿಬಂಧನೆಗಳನ್ನು ಉಲ್ಲಂಘಿಸಿರುವುದಕ್ಕಾಗಿ ಈಗಾಗಲೇ ಪ್ರಕರಣಗಳು ದಾಖಲಾಗಿವೆ. ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದುʼ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೇಕಿದ್ದರೆ ಇನ್ನು ಹೆಚ್ಚು ಪ್ರಕರಣಗಳನ್ನು ದಾಖಲಿಸಿ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಿರುವ ಅಷ್ಟು ಜನರ ಫೋಟೋಗಳನ್ನು ಕೊಡುತ್ತೇನೆ ನಾವು ಪಾದಯಾತ್ರೆ ಮಾಡಿ ತೀರುತ್ತೇವೆ. ಸರ್ಕಾರ ಪಾದಯಾತ್ರೆಯನ್ನು ತಡೆಯಲಿ ನೋಡೋಣ ಎಂದು ಸವಾಲೆಸೆದಿದ್ದಾರೆ.