ಬೆಂಗಳೂರು: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ.

ಕೆಲ ತಿಂಗಳ ಹಿಂದೆ ಅಕ್ರಮ ಬೆಟ್ಟಿಂಗ್ ದಂಧೆ ನಡೆಸಿದ ಆರೋಪದ ಮೇಲೆ ಶಾಸಕ ವೀರೇಂದ್ರ ಪಪ್ಪಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಆಕ್ರಮ ಹಣ ವರ್ಗಾವಣೆ ಆರೋಪದಡಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಈಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿದೆ.












