ಹರಿಯಾಣದ ಅದಂಪುರ್ ಕ್ಷೇತ್ರದ ಉಚ್ಚಾಟಿತ ಕಾಂಗ್ರೆಸ್ ಶಾಸಕ ಕುಲದೀಪ್ ಬಿಷ್ಣೋಯ್ ಭಾನುವಾರ ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಹರಿಯಾ ಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇತ್ತೀಚಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿತ್ತು.
ಕಳೆದ ಎರಡು ವಾರಗಳ ಅವಧಿಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆ ಇದು ಅವರ ಎರಡನೇ ಭೇಟಿಯಾಗಿದೆ. ಜುಲೈ 10ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಕುಲದೀಪ್ ಮಾತುಕತೆ ನಡೆಸಿದ್ದರು.
ಬಳಿಕ ಮಾತನಾಡಿದ ಬಿಷ್ಣೋಯ್ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಹಾಗೂ ಹರಿಯಾಣದ ಅಭಿವೃದ್ದಿ ಕಾರ್ಯಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳುತ್ತಾ ಸಿಎಂ ಖಟ್ಟರ್ ಹಾಗು ಬಿಜೆಪಿ ಹೈಕಮಾಂಡ್ರನ್ನು ಹಾಡಿ ಹೊಗಳಿದ್ದಾರೆ.
ಎರಡು ತಿಂಗಳ ಹಿಂದೆ ನಡೆದ ಹರಿಯಾಣ ಕಾಂಗ್ರೆಸ್ ಅಧ್ಯಕ್ಷರ ನೂತನ ನೇಮಕಾತಿ ರೇಸ್ನಲ್ಲಿ ಕುಲದೀಒ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತಾದರು ಸಹ ಕಡೆಯ ಕ್ಷಣದಲ್ಲಿ ಮಾಜಿ ಸಿಎಂ ಹೂಡಾ ಆಪ್ತ ಉದಯ್ ಭನ್ಗೆ ಕೈ ಸೇರಿತ್ತು.