• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಸ್ಪೀಕರ್ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ರಾ ಕಾಂಗ್ರೆಸ್ ಸಂಸದರು..?

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ಲೋಕಸಭಾ ಸ್ಪೀಕರ್ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ರಾ ಕಾಂಗ್ರೆಸ್ ಸಂಸದರು..?
Share on WhatsAppShare on FacebookShare on Telegram

ನವದೆಹಲಿ: ಸಂಸತ್ತಿನಲ್ಲಿ ನಡೆಯುತ್ತಿರುವ ಗದ್ದಲದ ನಡುವೆ ಕಾಂಗ್ರೆಸ್ ಸಂಸದರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ನುಗ್ಗಿ ಅವರನ್ನು ನಿಂದಿಸಿ ಪ್ರಧಾನಿಗೆ ಬೆದರಿಕೆ ಹಾಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು(Kiren Rijiju) ಆರೋಪಿಸಿದ್ದಾರೆ.

ADVERTISEMENT
Rahul Gandhi : ನೀವು ದೇಶಕ್ಕೆ ಹಾನಿಮಾಡ್ತಿದ್ದೀರಿ, ಸ್ವಲ್ಪನಾದ್ರು ಜವಾಬ್ದಾರಿ ಬೇಡವೆ..? #media #rahulgandhi

ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಿರಣ್‌ ರಿಜಿಜು, 20–25 ಕಾಂಗ್ರೆಸ್ ಸಂಸದರು ಸ್ಪೀಕರ್ ಅವರ ಕೊಠಡಿಗೆ ಪ್ರವೇಶಿಸಿದ ವೇಳೆ ಅಕ್ರಮವಾಗಿ ಚಿತ್ರೀಕರಿಸಲಾದ ದೃಶ್ಯ ಇದಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ನಮ್ಮ ಪಕ್ಷ ಚರ್ಚೆಯಲ್ಲಿ ನಂಬಿಕೆ ಇಡುತ್ತದೆ. ದೈಹಿಕ ಬೆದರಿಕೆಗೆ ಪ್ರೋತ್ಸಾಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಏನಿದು ಘಟನೆ?

2020ರ ಭಾರತ–ಚೀನಾ ಗಡಿ ಬಿಕ್ಕಟ್ಟಿನ ಕುರಿತು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಉಲ್ಲೇಖಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಲೋಕಸಭೆಯಲ್ಲಿ ಗದ್ದಲ ಉಂಟಾಯಿತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೆ ಐತಿಹಾಸಿಕ ವಿಷಯಗಳನ್ನು ಉಲ್ಲೇಖಿಸಲು ಅವಕಾಶ ನೀಡಲಾಗಿದ್ದರಿಂದ ವಿರೋಧ ಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

Rahul Gandhi ಭಾರತ ಮಾತೆಯನ್ನು ಮಾರಿದ್ದೀರಿ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ #pratidhvani #shivaratri

ಕಲಾಪ ಮುಂದೂಡಿಕೆಯಾದ ಬಳಿಕ ಕಾಂಗ್ರೆಸ್ ಸಂಸದರು ಸ್ಪೀಕರ್ ಅವರ ಕೊಠಡಿಗೆ ತೆರಳಿ ಪಕ್ಷಪಾತದ ನಡವಳಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ. ಆದರೆ ಈ ಆರೋಪಗಳನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಪ್ರಿಯಾಂಕಾ ಗಾಂಧಿ ಈ ಬಗ್ಗೆ ಮಾತನಾಡಿ, ಯಾರೂ ಸ್ಪೀಕರ್ ಅವರನ್ನು ನಿಂದಿಸಿಲ್ಲ. ಸಂಸದರು ತಮ್ಮ ಕುಂದುಕೊರತೆಗಳನ್ನು ಶಾಂತಿಯುತವಾಗಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Tags: BJPcongressIndiakannada newsKiren RijijuLok Sabhalok sabha sessionLok Sabha Speaker Om BirlaPM Narendra ModiPolitics
Previous Post

ಇನ್ಮುಂದೆ ಬೆಂಗಳೂರಲ್ಲಿ ಶ್ವಾನ ಸಾಕಲು ಲೈಸನ್ಸ್ ಕಡ್ಡಾಯ: ಇಲ್ಲಿದೆ ಮಹತ್ವದ ಮಾಹಿತಿ

Next Post

ಪಂಚ ಗ್ಯಾರಂಟಿ ಯಶಸ್ಸಿನ ಬಳಿಕ ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post
ಪಂಚ ಗ್ಯಾರಂಟಿ ಯಶಸ್ಸಿನ ಬಳಿಕ ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌

ಪಂಚ ಗ್ಯಾರಂಟಿ ಯಶಸ್ಸಿನ ಬಳಿಕ ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!