2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.
ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.
ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!
ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.*ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!* 2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ. *ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!* ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.