• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 25, 2023
in Top Story, ಕರ್ನಾಟಕ
0
ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.

ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು ಜೆಡಿಎಸ್ ಎನ್‌ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೇ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ‘ಇಂಡಿಯಾ’ ಗೆ ಸೇರುತ್ತಿದ್ದಾರೆ. ನಾನು ಕೇವಲ ಪಕ್ಷಕ್ಕೆ ಆಹ್ವಾನ ನೀಡಲು ಬಂದಿಲ್ಲ. ಒಬ್ಬೊಬ್ಬ ನಾಯಕರು, ಕಾರ್ಯಕರ್ತರು ಕನಿಷ್ಠ 10 ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ನೀಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ.

ಇತರರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸವನ್ನು ಬೆಂಗಳೂರಿಗೆ ಬಂದು ಮಾಡಬೇಕಾಗಿಲ್ಲ, ನೀವು ಇರುವ ಸ್ಥಳಗಳಲ್ಲೇ ಈ ಕೆಲಸ ಮಾಡಬೇಕು. ಕಳೆದ ವರ್ಷ ಇದೇ ಹೊತ್ತಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದೆವು‌. ಆದರೆ ಇಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ಅಂಬಾರಿ ಜೊತೆ ಹೆಜ್ಜೆ ಹಾಕುತ್ತಿದ್ದೇವೆ.

ಅಂಬಾರಿ ಮೆರವಣಿಗೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟ್ಯಾಬ್ಲೋ ಮೆರವಣಿಗೆ ಮಾಡಲಾಯಿತು. ಇಡೀ ದೇಶವೇ ‘ಕರ್ನಾಟಕ ಮಾದರಿ’ ಅನುಕರಣೆ ಮಾಡಲು ಕಾಯುತ್ತಿದೆ. ಈ ದೇಶದ ಪ್ರಧಾನಿ ಮೋದಿಯವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದರು. ಆದರೆ ಈಗ ಐದು ಗ್ಯಾರಂಟಿಗಳ ಬಗ್ಗೆ ಎಲ್ಲರೂ ವ್ಯಾಖ್ಯಾನ ಮಾಡುತ್ತಿದ್ದಾರೆ.

ಯಡಿಯೂರಪ್ಪ ಅವರು ಒಂದು ಕಾಳು ಅಕ್ಕಿ ಕಡಿಮೆಯಾದರೂ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಮಾಜಿ ಮಂತ್ರಿ ಹೇಳುತ್ತಿದ್ದರು, ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ- ಸೊಸೆಗೂ ಜಗಳ ತಂದು ಹಾಕುತ್ತಿದೆ ಸರ್ಕಾರ ಎಂದು. ಆದರೆ ಎಲ್ಲರ ಮಾತುಗಳು ಸುಳ್ಳಾಗಿವೆ, ಮೈಸೂರು ದಸರಾಗೆ ಲಕ್ಷಾಂತರ ತಾಯಂದಿರು, ಅಕ್ಕ- ತಂಗಿಯರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು, ಇಡೀ ಮೈಸೂರಿನ ತುಂಬಾ ಮಹಿಳೆಯರೇ ಇದ್ದರು. ನನ್ನ ಮನೆಯವರನ್ನು ದಸರಾ ನೋಡಲು ಕರೆದುಕೊಂಡು ಹೋಗಿದ್ದೆ, ಇಂತಹ ಬರಗಾಲದಲ್ಲೂ ಜನ ಸಂತೋಷದಿಂದ ಇರುವುದನ್ನು ನೋಡಿದೆ. ವಾಹನ ದಟ್ಟಣೆ ಹೆಚ್ಚಿದ್ದ ಕಾರಣ ಒಂದು ಗಂಟೆ ತಡವಾಯಿತು ಆದರೂ ಜನರನ್ನು ಕಂಡು ಸಂತೋಷವಾಯಿತು.

ನಾವು ಕೇವಲ ಬಸ್ ಪ್ರಯಾಣ ಮಾತ್ರ ಉಚಿತ ನೀಡಿದ್ದೇವೆ. ಹೋಟೆಲ್, ದೇವಸ್ಥಾನ, ಶಾಪಿಂಗ್ ಸೇರಿದಂತೆ ಅನೇಕ ಕಡೆಗಳಲ್ಲಿ ಖರ್ಚು ಮಾಡಿರುತ್ತಾರೆ. ಇದಕ್ಕೆ ನಾವು ಹಣ ಕೊಟ್ಟಿದ್ದೇವೆಯೇ? ಇಲ್ಲ ಆದರೆ ಗ್ಯಾರಂಟಿ ಯೋಜನೆಗಳಿಂದ ಹಣದ ವಹಿವಾಟು ಹೆಚ್ಚಾಗಿದೆ. ಹೋಟೆಲ್, ವಸತಿ ಸೇರಿದಂತೆ ಅನೇಕ ಕಡೆ ಬಿಲ್ ಕಟ್ಟುತ್ತಾರೆ. ಇದರಿಂದ ತೆರಿಗೆ ಸಂಗ್ರಹ ಪರೋಕ್ಷವಾಗಿ ಹೆಚ್ಚಳವಾಗುತ್ತಿದೆ.

ಗೃಹಲಕ್ಷ್ಮೀಯರು ಶಕ್ತಿ ತುಂಬಿದರು, ಗೃಹಲಕ್ಷ್ಮೀಯರು ಮನೆ ಬೆಳಗುತ್ತಿದ್ದಾರೆ, ತಮ್ಮ ಪಾಲಿಗೆ ಬಂದ ಹಣವನ್ನು ಸಂಸಾರಕ್ಕೆ ವಿತರಣೆ ಮಾಡುತ್ತಿದ್ದಾರೆ. ಇದು ಜನರಿಗೆ ನಮ್ಮ ಪಕ್ಷ ನೀಡಿರುವ ಶಕ್ತಿ. ನವರಾತ್ರಿಯಲ್ಲಿ ವಿಜಯದಶಮಿಯಾಗಿ ಮೊದಲನೇ ದಿನ. ಈ ನಾಡಿಗೆ ಆವರಿಸಿರುವ ಬರಗಾಲ ಮುಕ್ತಿಯಾಗಲಿ, ಜನರಿಗೆ ನೆಮ್ಮದಿ ಸಿಗಲಿ, ನಾಡಿನಲ್ಲಿ ಶಾಂತಿ ನೆಲೆಸಬೇಕು ಎಂದು ಪ್ರಾರ್ಥನೆ ಮಾಡಿದ್ದೇವೆ.

Tags: BangloredcmdkshivakuamrJDSKarnatakaKerala
Previous Post

ಹುಲಿ ಚರ್ಮದ ಮೇಲೆ ಕುಳಿತಿರುವ ವಿನಯ್ ಗುರೂಜಿ ಫೋಟೋ ವೈರಲ್‌ : ಆಶ್ರಮದಿಂದ ಸ್ಪಷ್ಟೀಕರಣ!

Next Post

KPSC ಪರೀಕ್ಷೆ ದಿನಾಂಕ ಬದಲಾವಣೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
KPSC ಪರೀಕ್ಷೆ ದಿನಾಂಕ ಬದಲಾವಣೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

KPSC ಪರೀಕ್ಷೆ ದಿನಾಂಕ ಬದಲಾವಣೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada