ಭಾರತೀಯ ರಾಷ್ಟ್ರೀಯ ಕಾಂಗ್ರೆಸ ಚುನಾವಣೆ ಕೊನೆ ಹಂತ ತಲುಪಿದ್ದು ಅಕ್ಟೋಬರ್ 17ರಂದು ಬೆಳ್ಳಗ್ಗೆ 10ರಿಂದ ಸಂಜೆ 4ರವರೆಗೆ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಗಳಲ್ಲಿ ಮತದಾನ ನಡೆಯಲಿದೆ.
ಮತದಾನ ಪ್ರಕ್ರಿಯೆಯಲ್ಲಿ ಒಟ್ಟ 9 ಸಾವಿರಕ್ಕು ಹೆಚ್ಚು ನಾಯಕರು ಭಾಗಿಯಾಲಿದ್ದಾರೆ ಎಂದು ತಿಳಿದು ಬಂದಿದೆ. 137 ವರ್ಷಗಳ ಸುಧೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಒಟ್ಟಾರೆಯಾಗಿ ಇದು 6ನೇ ಬಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ಹಿರಿಯ ಕಾಂಗ್ರೆಸ್ಸಿಗ ಗಾಂಧಿ ಕುಟುಂಬದ ನಿಕಟವರ್ತಿ ಎಂದೇ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ತಿರುವನಂತಪುರ ಸಂಸದ ಶಶಿ ತರೂರ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.
ಇತ್ತ ಖರ್ಗೆರನ್ನು ಹೈಕಮಾಂಡ್ ನೆಚ್ಚಿನ ಅಭ್ಯರ್ತೀ ಎಂದೇ ಬಿಂಬಿಸಲಾಗಿದೆ ಮತ್ತು ತಾವು ಬದಲಾವಣೆಗಾಗಿ ಸ್ಪರ್ಧಿಸುತ್ತಿರುವುದು ಎಂದು ಮತ್ತೋರ್ವ ಅಭ್ಯರ್ಥಿ ಶಶಿ ತರೂರ್ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಒಟ್ಟು 280 ಮಂದಿ ಮತದಾನ ಮಾಡಲಿದ್ದಾರೆ. ಭಾರತ ಜೋಡೋ ಯಾತ್ರೆಯಲ್ಲಿ ಇರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿಯ ಸಂಗನಕಲ್ಲುವಿನಲ್ಲಿ ಮತದಾನ ಮಾಡಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ.






