• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ಸೋಮವಾರ (ಆ. 19) ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ” ಎಂದರು.”ಪ್ರಕರಣ ಅಲ್ಲದಿದ್ದರೂ ಸಹ ಇದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಮುಖಂಡರಿಗೆ ತಿಳಿಸಿದ್ದೇವೆ. ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸಿ ಕಲ್ಲು ಎಸೆಯುವ ಕೆಲಸ ಮಾಡಬಹುದು ಇದರ ಬಗ್ಗೆಯೂ ಎಚ್ಚರದಿಂದ ಇರಿ ಎಂದು ಸೂಚನೆ ನೀಡಿದ್ದೇವೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿಯ ಬಗ್ಗೆ ಪ್ರಶ್ನಿಸಿದಾಗ “ಪ್ರಸ್ತುತ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಣೆ ನೀಡಿದ್ದೇವೆ” ಎಂದು ತಿಳಿಸಿದರು.ರಾಷ್ಟ್ರ ವ್ಯಾಪಿ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ “ಇದರ ಬಗ್ಗೆ ಗೊತ್ತಿಲ್ಲ, ಇದನ್ನು ಎಐಸಿಸಿ ನಿರ್ಧಾರ ಮಾಡುತ್ತದೆ”ಎಂದರು.ತುಂಗಭದ್ರಾ ಗೇಟ್ ಅಳವಡಿಕೆಯ ಬಗ್ಗೆ ಕೇಳಿದಾಗ “ಗೇಟ್ ಅಳವಡಿಕೆ ಯಶಸ್ವಿಯಾಗಿ ನೆರವೇರಿದೆ. ಅವಘಡ ಸಂಭವಿಸಿದಾಗ ಕಾರಜೋಳ, ಬೊಮ್ಮಾಯಿ, ವಿಜಯೇಂದ್ರ, ಅಶೋಕ್ ಹಾಗೂ ಕುಮಾರಸ್ವಾಮಿ ಸೇರಿದಂತೆ ಅನೇಕರು ಟೀಕೆಗಳನ್ನು ಮಾಡಿದ್ದರು. ಅವರ ಟೀಕೆಗಳು ಸತ್ತು ಹೋದವು, ಆದರೆ ನಮ್ಮ ಕೆಲಸ ಮಾತ್ರ ಉಳಿಯಿತು. ಅದಕ್ಕೆ ನಾನು ಯಾವಾಗಲು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ. ಅಣೆಕಟ್ಟಿನ ಗೇಟ್ ದುರಸ್ತಿ ಮಾಡುವಲ್ಲಿ ಶ್ರಮಿಸಿದ ಎಲ್ಲರಿಗೂ ಸರ್ಕಾರ ಗೌರವ ಸಲ್ಲಿಸಲಿದೆ” ಎಂದು ಹೇಳಿದರು.

Tags: CM Siddaramaiah‌Congress PartyDCM DK ShivakumarMallikarjun Kharge Leader of the Opposition in Rajya Sabha
Previous Post

ಪ್ರಭಾಸ್-ಹನು ರಾಘವಪುಡಿ ಚಿತ್ರ ಹೈದರಾಬಾದ್‌ನಲ್ಲಿ ಪ್ರಾರಂಭವಾಯಿತು

Next Post

ಸುಪ್ರೀಂ ಕೋರ್ಟ್ ಸ್ಯೂ ಮೋಟೋ ಕಾಗ್ನಿಜೆನ್ಸ್, ಸಿಬಿಐ ಆರೋಪಿ ಮಾನಸಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತದೆ;

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಸುಪ್ರೀಂ ಕೋರ್ಟ್ ಸ್ಯೂ ಮೋಟೋ ಕಾಗ್ನಿಜೆನ್ಸ್, ಸಿಬಿಐ ಆರೋಪಿ ಮಾನಸಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತದೆ;

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada