ಅಂಬೇಡ್ಕರ್ (Ambedkar) ಅವರ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah)ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸತ್ ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದು, ಇತ್ತ ರಾಜ್ಯದಲ್ಲೂ ಇದೇ ವಿಚಾರ ಚರ್ಚೆಯ ವಸ್ತುವಾಗಿದೆ.

ಹೀಗಾಗಿ ಇಂದು ಚಳಿಗಾಲದ ಅಧಿವೇಶನದಲ್ಲಿ ಕೂಡ ಸಿಎಂ ಸಿದ್ದರಾಮಯ್ಯ (Cm siddaramaiah) ಹಾದಿಯಾಗಿ ಎಲ್ಲಾ ಕಾಂಗ್ರೆಸ್ ನಾಯಕರು ಸದನದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ವೇಳೆ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುವ ಧೈರ್ಯವನ್ನು ಅಮಿತ್ ಶಾ ಹೇಗೆ ಮಾಡಿದ್ರು. ಈ ಕೂಡಲೇ ಅವರನ್ನು ಸಂಪುಟದಿಂದ ಪ್ರಧಾನಿ ಮೋದಿ (Pm modi) ಕೈಬಿಡಬೇಕು ಎಂದು ಆಗ್ರಹಿಸಿ ಪ್ರತಿಭಟ್ನೆ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದ ಎಲ್ಲಾ ಕಾಂಗ್ರೆಸ್ ಸದಸ್ಯರು ಬಾಬಾ ಸಾಹೇಬರ ಭಾವಚಿತ್ರ ಹಿಡಿದು ಪ್ರತಿಭಟಿಸಿದ್ದು ವಿಶೇಷವಾಗಿತ್ತು.