ಮೈಸೂರು: ಸಚಿವ ಅಶ್ವತ್ಥ ನಾರಾಯಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ನೀಡಿರುವ ಪ್ರಚೋಧನಾಕಾರಿ ಹೇಳಿಕೆಗೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಅಂತೆಯೇ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಇಂದು ಕಾಂಗ್ರೆಸ್ ಕಚೇರಿಯ ಮುಂಭಾಗ ಕಾಂಗ್ರೆಸ್ ಮುಖಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಶ್ವತ್ಥ ನಾರಾಯಣ್ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಎನ್.ಎಂ ನವೀನ್ ಕುಮಾರ್, ಅಶ್ವಥ್ ನಾರಾಯಣ್ ಹೇಳಿಕೆ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಭಾರತೀಯ ದಂಡ ಸಂಹಿತೆ 108 ಮತ್ತು 505 ಅಡಿಯಲ್ಲಿ ಈ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕು. ಹಾಗೂ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಲ್ಬಾಡ್, ಮೈಸೂರಿನ ನಗರ ಕಾಂಗ್ರೆಸ್ ಅಧ್ಯಕ್ಷರಾದ ಅಬ್ರಾರ್, ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ರಾಜೇಶ್ ಎಂ, ದೀಪಕ್ ಶಿವಣ್ಣ,ಪೈಲ್ವಾನ್ ಸುನಿಲ್, ರಾಕೇಶ್ ಗೌಡ, ಮಲ್ಲೇಶ, ಭರತ್, ಆನಂದ್, ಉಮೇಶ್ ಹಾಗೂ ಮುಂತಾದವರು ಭಾಗವಹಿಸಿದ್ದರು.