• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ ಪ್ರತಿಭಟನೆ: ಸಚಿವ ಸುಧಾಕರ್

Any Mind by Any Mind
June 16, 2022
in ಕರ್ನಾಟಕ
0
ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಮುಖಂಡರು ಗಾಳಿಗೆ ತೂರಿ ಬೀದಿಗಿಳಿದಿರುವುದು ವಿಪರ್ಯಾಸ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಿಡಿ ಕಾರಿದರು.

ADVERTISEMENT

ಚಿಕ್ಕಬಳ್ಳಾಪುರದಲ್ಲಿ ಘನತ್ಯಾಜ್ಯ ಘಟಕಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು,  ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ ಯಾವ ವಿಷಯಕ್ಕೆ, ಯಾವ ಸಂದರ್ಭದಲ್ಲಿ ಮತ್ತು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಮುಖ್ಯ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದೇ ತಪ್ಪು ಎಂದರೆ ಹೇಗೆ? ಈ ಹಿಂದೆ ಪ್ರಧಾನಿ ಆಗಿದ್ದವರು ವಿಚಾರಣೆ ಎದುರಿಸಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಚಾರಣೆಗೆ ಹಾಜರಾಗಿದ್ದಾಗ ಇವರು ಎಲ್ಲಿ ಹೋಗಿದ್ದರು ಎಂದು ಕಿಡಿ ಕಾರಿದರು.

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲು ಹೈಕೋಟ್೯ ಅವಕಾಶ ನೀಡಿದೆ. ಆದರೂ ಕಾಂಗ್ರೆಸ್ಸಿಗರು ವಿತಂಡವಾದ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬೀದಿ ಬೀದಿಯಲ್ಲಿ ಪ್ರತಿಭಟನೆ ಮಾಡಿ, ಸಂಚಾರಕ್ಕೆ ಅಡಚಣೆ ಮಾಡಿ, ಜನರಿಗೆ ತೊಂದರೆ ಕೊಟ್ಟು ಏನು ಸಾಧನೆ ಮಾಡಲು ಹೊರಟಿದ್ದಾರೆ, ಈ ದೇಶಕ್ಕೆ ಏನು ಸಂದೇಶ ನೀಡುತ್ತಿದ್ದಾರೆ. ಕಾನೂನು ಒಬ್ಬರಿಗೊಂದು, ಮತ್ತೊಬ್ಬರಿಗೆ ಇನ್ನೊಂದು ಇರಬೇಕಾ, ಸಮಾನತೆ ಬಗ್ಗೆ, ಸಾಮಾಜಿಕ ನ್ಯಾಯ, ಸಂವಿಧಾನದ ಬಗ್ಗೆ ಉಪದೇಶ ನೀಡುವ ಇವರು ಇದ್ಯಾವುದಕ್ಕೂ  ಕೊಡದಿದ್ದರೆ ಸರ್ಕಾರಗಳು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ನನ್ನದು.

ಆರೋಗ್ಯ ಸಚಿವನಾಗಿ ಜನತೆಯ ಆರೋಗ್ಯ ಕಾಪಾಡುವುದು ನನ್ನ ಕರ್ತವ್ಯ. ಹಾಗಾಗಿ ಇದು ಪ್ರತಿಭಟಿಸುವ ಸಮಯವಲ್ಲ. ಕೋವಿಡ್ ಹೆಚ್ಚಳ ಆದಲ್ಲಿ ಅದಕ್ಕೆ ಪ್ರತಿಭಟನೆ ಕಾರಣ ಆಗುತ್ತದೆ ಎಂದು ಹೇಳಿದ್ದೇನೆ. ಅದನ್ನು ಸರಿಯಿಲ್ಲ ಎಂದರೆ ಏನು ಹೇಳಬೇಕು, ಎರಡನೇ ಅಲೆಯಲ್ಲಿ ಕೋವಿಡ್ ತೀವ್ರವಾದಾಗ ಸರ್ಕಾರವನ್ನು ಟೀಕಿಸಿದ ಇವರು, ಮುಂದಿನ ದಿನಗಳಲ್ಲಿ ಸಮಸ್ಯೆಯಾದರೆ ಯಾರು ಹೊಣೆ ಹೊರುತ್ತಾರೆ?  ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್ ಜವಾಬ್ದಾರರಲ್ಲ, ಡಾ. ಸುಧಾಕರ್ ಮತ್ತು ಬಸವರಾಜ ಬೊಮ್ಮಾಯಿ  ಜವಾಬ್ದಾರರಾಗಬೇಕು ಹಾಗಾಗಿಯೇ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡರು.

ಇವರ ಪ್ರತಿಭಟನೆಯನ್ನು ಜನ ಗಮನಿಸುತ್ತಿದ್ದಾರೆ, ಪ್ರಜಾಪ್ರಭುತ್ವದ ನೀತಿ ನಿಯಮಾವಳಿಗಳನ್ನು ಕಗ್ಗೊಲೆ ಮಾಡುತ್ತಿದ್ದಾರೆ, ಎಲ್ಲವನ್ನೂ ಗಾಳಿಗೆ ತೂರಿದ್ದಾರೆ, ಪ್ರತಿಭಟನೆಗಳಿಂದ ತನಿಖಾ ಸಂಸ್ಥೆಯವರು ವಿಚಾರಣೆಗೆ ಕರೆಯಬಾರದು ಎಂದು ಒತ್ತಡ ಹೇರಲು ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಪ್ರತಿಭಟನೆ ನಡೆಸುತ್ತಿರುವ ನಾಯಕರೇ ಆತ್ಮವಿಮರ್ಶೆ ಮಾಡಿಕೊಳ್ಳಲಿ, ದೆಹಲಿಯಿಂದ ಬೆಂಗಳೂರಿನವರೆಗೂ ಅವರು ನಡೆಸಿರುವ ಪ್ರಹಸನವನ್ನು  ರಾಜ್ಯದ ಜನರು ಗಮನಿಸುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಜನರೇ ಅವರ ತೀರ್ಮಾನ ನೀಡುತ್ತಾರೆ ಎಂದು ಹೇಳಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿಸಚಿವ ಸುಧಾಕರ್
Previous Post

ನಮ್ಮ ಕಚೇರಿಗೆ ಹೋಗಲೂ ನಮಗೆ ಬಿಡೋದಿಲ್ಲ ಅಂದರೆ ಏನು ಅರ್ಥ?ಸಲೀಂ ಅಹ್ಮದ್‌

Next Post

ನಮ್ಮ ಕಚೇರಿಗೆ ಹೋಗಲೂ ನಮಗೆ ಬಿಡೋದಿಲ್ಲ ಅಂದರೆ ಏನು ಅರ್ಥ?ಸಲೀಂ ಅಹ್ಮದ್‌

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ನಮ್ಮ ಕಚೇರಿಗೆ ಹೋಗಲೂ ನಮಗೆ ಬಿಡೋದಿಲ್ಲ ಅಂದರೆ ಏನು ಅರ್ಥ?ಸಲೀಂ ಅಹ್ಮದ್‌

ನಮ್ಮ ಕಚೇರಿಗೆ ಹೋಗಲೂ ನಮಗೆ ಬಿಡೋದಿಲ್ಲ ಅಂದರೆ ಏನು ಅರ್ಥ?ಸಲೀಂ ಅಹ್ಮದ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada